ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಭಾರತ ಕ್ಲೀನ್ ಸ್ವೀಪ್ ಮಾಡಿದ್ರೇ 'ಪಾಕಿಸ್ತಾನಕ್ಕೆ ಅಗ್ರಸ್ಥಾನ'!

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಸದ್ಯ ಅತ್ಯುತ್ತಮ ಫಾರ್ಮ್ ನಲ್ಲಿದ್ದು ಮುಂಬರುವ ಟಿ20 ಸರಣಿಯನ್ನು ಗೆಲ್ಲುವ...
ಟೀಂ ಇಂಡಿಯಾದ
ಟೀಂ ಇಂಡಿಯಾದ
Updated on
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಸದ್ಯ ಅತ್ಯುತ್ತಮ ಫಾರ್ಮ್ ನಲ್ಲಿದ್ದು ಮುಂಬರುವ ಟಿ20 ಸರಣಿಯನ್ನು ಗೆಲ್ಲುವ ಹುಮ್ಮಸ್ಸಿನಲ್ಲಿದೆ.
ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ ಕ್ಲೀನ್ ಸ್ವೀಪ್ ಸಾಧಿಸಿದರೆ, ಐಸಿಸಿ ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ. ಆದರೆ ಕಿವೀಸ್ ತಂಡವನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದರೇ ಭಾರತ ತಂಡದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮಾತ್ರ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. 
ಸದ್ಯ ನ್ಯೂಜಿಲೆಂಡ್ ತಂಡದ 125 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. 124 ಅಂಕಗಳೊಂದಿಗೆ ಪಾಕಿಸ್ತಾನ ಎರಡನೇ ಸ್ಥಾನದಲ್ಲಿದ್ದು ಭಾರತ ತಂಡ ಕಿವೀಸ್ ವಿರುದ್ಧದ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದರೆ 122 ಅಂಕಗಳನ್ನು ಪಡೆದು ಎರಡನೇ ಸ್ಥಾನಕ್ಕೆ ಜಿಗಿಯಲಿದೆ. ಇನ್ನು ಅಂಕಪಟ್ಟಿಯಲ್ಲಿ 124 ಅಂಕಗಳನ್ನು ಪಡೆದಿರುವ ಪಾಕಿಸ್ತಾನ ಅಗ್ರಸ್ಥಾನಕ್ಕೇರಲಿದೆ. ಇತ್ತ ಭಾರತ ವಿರುದ್ಧ ಕ್ಲೀನ್ ಸ್ವೀಪ್ ಸೋಲು ಕಂಡರೇ ನ್ಯೂಜಿಲೆಂಡ್ 114 ಅಂಕಗಳೊಂದಿಗೆ ಐದನೇ ಸ್ಥಾನಕ್ಕೆ ಜಿಗಿಯಲಿದೆ. 
ಇನ್ನು ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಭಾರತ ವಿರುದ್ಧ ಸರಣಿಯನ್ನು ಸೋತರು ಸಹ 121 ಅಂಕಗಳನ್ನು ಸಂಪಾದಿಸಿ ಎರಡನೇ ಅಥವಾ ಮೂರನೇ ಸ್ಥಾನಕ್ಕೆ ತೃಪ್ತಿಪಡಲಿದೆ. ಭಾರತ ಮಾತ್ರ ಸರಣಿಯನ್ನು ಗೆದ್ದರು, ಕ್ಲೀನ್ ಸ್ವೀಪ್ ಮಾಡಿದರು ಎರಡನೇ ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಿದೆ. 
ಟೀಂ ಇಂಡಿಯಾ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ನಲ್ಲಿ ಅಗ್ರಸ್ಥಾನ ಸಂಪಾದಿಸಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ 120 ಅಂಕ ಗಳಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಅಗ್ರಸ್ಥಾನವನ್ನು ಹಂಚಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com