ಇಂಗ್ಲೆಂಡ್ ಕ್ರಿಕೆಟ್ ಬೌಲಿಂಗ್‍ನಲ್ಲಿ ಯಾರು ಮಾಡದ ಸಾಧನೆಗೈದ ಜೇಮ್ಸ್ ಆ್ಯಂಡರ್ಸನ್

ಇಂಗ್ಲೆಂಡಿನ ವೇಗಿ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಟೆಸ್ಟ್ ನಲ್ಲಿ 500 ವಿಕೆಟ್ ಕ್ಲಬ್ ಸೇರಿದ್ದಾರೆ...
ಜೇಮ್ಸ್ ಆ್ಯಂಡರ್ಸನ್
ಜೇಮ್ಸ್ ಆ್ಯಂಡರ್ಸನ್
ಲಂಡನ್: ಇಂಗ್ಲೆಂಡಿನ ವೇಗಿ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಟೆಸ್ಟ್ ನಲ್ಲಿ 500 ವಿಕೆಟ್ ಕ್ಲಬ್ ಸೇರಿದ್ದಾರೆ. 
ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಆರಂಭಿಕ ಆಟಗಾರ ಕ್ರೆಗ್ ಬ್ರಾಥ್ ವೈಟ್ ಅವರನ್ನು ಬೌಲ್ಡ್ ಮಾಡುವ ಮೂಲಕ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇನ್ನು 500 ವಿಕೆಟ್ ಪಡೆದ ಇಂಗ್ಲೆಂಡಿನ ಮೊದಲ ಬೌಲರ್ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ. 
ಜೇಮ್ಸ್ ಆ್ಯಂಡರ್ಸನ್ ಅವರು 129ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದ 6ನೇ ಆಟಗಾರನಾಗಿದ್ದಾರೆ. 800 ವಿಕೆಟ್ ಪಡೆದಿರುವ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಗರಿಷ್ಠ ವಿಕೆಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ಬೌಲರ್ ಶೇನ್ ವಾರ್ನ್ 708, ಟೀಂ ಇಂಡಿಯಾದ ಖ್ಯಾತ ಸ್ಪಿನ್ ಬೌಲರ್ ಅನಿಲ್ ಕುಂಬ್ಳೆ 619, ಗ್ಲೇನ್ ಮೆಕ್ ಗ್ರಾಥ 563 ಮತ್ತು ಕರ್ಟ್ನಿ ವಾಲ್ಶ್ 519 ವಿಕೆಟ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com