ಶಿಖರ್ ಧವನ್ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಗಳಿಗೆ ಶಿಖರ್ ಧವನ್ ಅಲಭ್ಯರಾಗಲಿದ್ದಾರೆ. ಇನ್ನು ಧವನ್ ಗೆ ಬದಲಾಗಿ ಯಾವುದೇ ಆಟಗಾರನ ಹೆಸರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಘೋಷಿಸಿಲ್ಲ.