ನಾನು ಶತಕಕ್ಕಾಗಿ ಆಡುವುದಿಲ್ಲ, ಆದ್ದರಿಂದಲೇ ಅದನ್ನು ಮೀರಿ ಆಡುತ್ತೇನೆ: ಕೊಹ್ಲಿ

Published On :
ಚೆನ್ನೈ: ನಾನು ಸೆಂಚೂರಿ ಸಿಡಿಸಲೆಂದೆ ಆಡುವುದಿಲ್ಲ, ಆದ್ದರಿಂದಲೇ ಅದನ್ನು ಮೀರಿ ಆಡುತ್ತೇನೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಆಟಗಾರರು ಪಂದ್ಯಗಳಲ್ಲಿ ಶತಕ ಸಿಡಿಸಲೆಬೇಕು ಎಂದು ಆಡಿದರೇ ನಾವು ಅದಕ್ಕಿಂತ ಹೆಚ್ಚಿನದನ್ನು ಸಾಧಿಸಲು ಸಾಧ್ಯವಿಲ್ಲ. ನಾನು ಶತಕವನ್ನು ಸಿಡಿಸಬೇಕು ಎಂದು ತಲೆಯಲ್ಲಿಟ್ಟುಕೊಂಡು ಆಡುವುದಿಲ್ಲ ಹೀಗಾಗಿ ನಾನು ಅದಕ್ಕಿಂತ ದೊಡ್ಡ ಮೈಲಿಗಲ್ಲನ್ನು ಸ್ಥಾಪಿಸಿದ್ದೇನೆ ಎಂಬ ಹೊಸ ಮಂತ್ರವನ್ನು ಉಪದೇಶಿಸಿದ್ದಾರೆ.
ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಆಟಗಾರರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಟೀಂ ಇಂಡಿಯಾದ ಮಾಜಿ ಆಟಗಾರ ಮಾಸ್ಟರ್ ಬಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 49 ಶತಕವನ್ನು ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ.
ಏಕದಿನ ಪಂದ್ಯದಲ್ಲಿ ಹೆಚ್ಚು ಶತಕ ಸಿಡಿಸಿದ ಎರಡನೇ ಆಟಗಾರನಾಗಿದ್ದೀರಾ ಇದು ಹೇಗೆ ಸಾಧ್ಯ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ ನಾನು ಶತಕ ಸಿಡಿಸಬೇಕು ಎಂದು ಆಡುವುದಿಲ್ಲ. ಅದಕ್ಕಾಗಿಯೇ ನಾನು ಅದಕ್ಕಿಂತ ಹೆಚ್ಚಿನದನ್ನು ಸಾಧಿಸಿದ್ದೇನೆ. ಶತಕ ಬಾರಿಸಬೇಕೆಂಬ ಒತ್ತಡಕ್ಕೆ ಸಿಲುಕುವುದಿಲ್ಲ. ಅದಕ್ಕಾಗಿ ನನ್ನ ವೈಯಕ್ತಿಕ ಸಾಧನೆಗಿಂತ ತಂಡದ ಜಯಕ್ಕಾಗಿ ಆಡುತ್ತೇನೆ ಎಂದು ಹೇಳಿದ್ದಾರೆ.
ತಂಡದಲ್ಲಿ ನಾನು 8 ವರ್ಷ, 10 ವರ್ಷ ಅಥವಾ 12 ವರ್ಷ ಆಡುತ್ತೇನೆ ಎಂದು ಭಾವಿಸುವುದಿಲ್ಲ. ಅದು ಸ್ವಭಾವತ ನನಗೆ ಬಂದಿಲ್ಲ. ನಾನು ಬ್ಯಾಟಿಂಗ್ ಮೂಲಕ ತಂಡಕ್ಕೆ ಜಯ ತಂದುಕೊಡುವುದಕ್ಕೆ ಹೆಚ್ಚಿನ ಮಹತ್ವ ನೀಡುತ್ತೇನೆ. ಮೈದಾನದಲ್ಲಿ ನಾನು ಶೇ.120ರಷ್ಟು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


