ಶ್ರೀಶಾಂತ್ ಆಜೀವ ನಿಷೇಧ: ಕೇರಳ ಹೈಕೋರ್ಟ್‌ಗೆ ಬಿಸಿಸಿಐ ಮೇಲ್ಮನವಿ

ಸ್ಪಾಟ್ ಫಿಕ್ಸಿಂಗ್ ಆರೋಪ ಸಂಬಂಧ ಆಜೀವ ನಿಷೇಧಕ್ಕೆ ಗುರಿಯಾಗಿದ್ದ ವೇಗಿ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು ತೆರವುಗೊಳಿಸಿದ್ದ ಕೇರಳ ಹೈಕೋರ್ಟ್ ನಲ್ಲಿ...
ಶ್ರೀಶಾಂತ್
ಶ್ರೀಶಾಂತ್
ಕೊಚ್ಚಿ: ಸ್ಪಾಟ್ ಫಿಕ್ಸಿಂಗ್ ಆರೋಪ ಸಂಬಂಧ ಆಜೀವ ನಿಷೇಧಕ್ಕೆ ಗುರಿಯಾಗಿದ್ದ ವೇಗಿ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು ತೆರವುಗೊಳಿಸಿದ್ದ ಕೇರಳ ಹೈಕೋರ್ಟ್ ನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೇಲ್ಮನವಿ ಅರ್ಜಿ ಸಲ್ಲಿಸಿದೆ. 
ಬಿಸಿಸಿಐ ಹೇರಿದ್ದ ಆಜೀವ ನಿಷೇಧವನ್ನು ತೆರವುಗೊಳಿಸಬೇಕು ಎಂದು ಕೋರಿ ಶ್ರೀಶಾಂತ್ ಕೇರಳ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ನ್ಯಾಯಾಲಯ ಕ್ರಿಕೆಟ್ ಆಡಲು ಶ್ರೀಶಾಂತ್ ಗೆ ಅವಕಾಶ ನೀಡಬೇಕು ಎಂದು ಸೂಚಿಸಿತ್ತು.  
ಕೇರಳ ಹೈಕೋರ್ಟ್ ನ ಈ ಆದೇಶ ಹಿನ್ನೆಲೆಯಲ್ಲಿ ಬಿಸಿಸಿಐ ಮೇಲ್ಮನವಿ ಅರ್ಜಿ ಸಲ್ಲಿಸಿದೆ. 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿ ಶ್ರೀಶಾಂತ್ ಬಿಸಿಸಿಐನಿಂದ ಅಜೀವ ನಿಷೇಧಕ್ಕೆ ಒಳಗಾಗಿದ್ದರು. ಪ್ರಕರಣ ಸಂಬಂಧ ಸಾಕ್ಷ್ಯಾಧಾರದ ಕೊರತೆಯಿಂದಾಗಿ 2015ರಲ್ಲಿ ದೆಹಲಿ ನ್ಯಾಯಾಲಯ ಶ್ರೀಶಾಂತ್ ರನ್ನು ದೋಷಮುಕ್ತಗೊಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com