ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸಿದ್ದ ಪಾಂಡ್ಯ ತೊಟ್ಟಿದ್ದು ಮುಂಬೈ ಇಂಡಿಯನ್ಸ್ ಗ್ಲೌಸ್

ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್...
ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ
ಚೆನ್ನೈ: ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ಮಾಡಿದ್ದರು. ಈ ವೇಳೆ ಪಾಂಡ್ಯ ತಂಡದ ಗ್ಲೌಸ್ ಬದಲಿಗೆ ಮುಂಬೈ ಇಂಡಿಯನ್ಸ್ ಗ್ಲೌಸ್ ತೊಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ. 
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 87 ರನ್ ಗೆ 5 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದ್ದ ತಂಡಕ್ಕೆ ಆಸರೆಯಾಗಿದ್ದು ಹಾರ್ದಿಕ್ ಪಾಂಡ್ಯ. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಪಾಂಡ್ಯ 66 ಎಸತೆಗಳಲ್ಲಿ 5 ಸಿಕ್ಸರ್ ಮತ್ತು 5 ಬೌಂಡರಿ ಸೇರಿದಂತೆ 83 ರನ್ ಗಳನ್ನು ಸಿಡಿಸಿದ್ದರು. ಇದು ತಂಡ ಉತ್ತಮ ಮೊತ್ತ ಕಲೆಹಾಕಲು ಸಾಧ್ಯವಾಯಿತು. 
ಅಲ್ಲದೆ ಈ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 26 ರನ್ ಗಳಿಂದ ಜಯ ಗಳಿಸಿ ಟೂರ್ನಿಯಲ್ಲಿ ಪ್ರಥಮ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಆಡಿದ್ದ ಹಾರ್ದಿಕ್ ಪಾಂಡ್ಯ ಐಪಿಎಲ್ ಫ್ರಾಂಚೈಸಿ ತಂಡದ ಗ್ಲೌಸ್ ತೊಟ್ಟಿದ್ದು ಅಭಿಮಾನಿಗಳ ಹುಬ್ಬೇರಿಸಿದೆ. ಜತೆಗೆ ಟ್ವೀಟರ್ ನಲ್ಲಿ ಈ ಬಗ್ಗೆ ಅಸಮಾಧಾನಗಳೂ ವ್ಯಕ್ತವಾಗಿದೆ. 
ಇನ್ನು ರಾಷ್ಟ್ರೀಯ ತಂಡದಲ್ಲಿ ಅವಕಾಶ ಪಡೆಯಲು ಮುಂಬೈ ಇಂಡಿಯನ್ಸ್ ಮುಖ್ಯವಾಗಿರುವುದರಿಂದ ತಂಡದ ಮೇಲಿನ ಪ್ರೀತಿಯಿಂದಾಗಿಯೇ ಪಾಂಡ್ಯ ಮುಂಬೈ ಇಂಡಿಯನ್ಸ್ ಗ್ಲೌಸ್ ಧರಿಸಿ ಬ್ಯಾಟಿಂಗ್ ಮಾಡುತ್ತಾರೆ ಎಂಬ ನಂಬಿಕೆಯೂ ಅವರಲ್ಲಿದೆ ಎನ್ನಲಾಗಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com