ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 50 ರನ್ ಗಳ ಜಯ ಗಳಿಸಿದೆ.
ಭಾರತ ನೀಡಿದ 253 ರನ್ ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡಕ್ಕೆ ಚಾಹಲ್, ಕುಲ್ದೀಪ್ ಯಾದವ್ ಬೌಲಿಂಗ್ ಮಾರಕವಾಗಿ ಪರಿಣಮಿಸಿತು. ಪರಿಣಾಮ202 ರನ್ ಗಳಿಸಿದ್ದ ಆಸ್ಟ್ರೇಲಿಯಾ 43.1 ಓವರ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಭಾರತಕ್ಕೆ ಶರಣಾಯಿತು.
ಇದೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆಯನ್ನು ಕುಲ್ದೀಪ್ ಯಾದವ್ ಮಾಡಿದ್ದು, ಹ್ಯಾಟ್ರಿಕ್ ಪಡೆದ ಮೂರನೇ ಬೌಲರ್ ಆಗಿದ್ದಾರೆ.