ಕೋಲ್ಕತ್ತಾ: ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಅವರ ಕನಸಿನ ತಂಡವನ್ನು ರೂಪಿಸಿದ್ದು ಅದರಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಸ್ಥಾನ ನೀಡದೆ ಇರುವುದು ಅಚ್ಚರಿಗೆ ಕಾರಣವಾಗಿದೆ.
ಇನ್ನು ಕನಸಿನ ತಂಡದಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಹಾಗೂ ಹರ್ಭಜನ್ ಸಿಂಗ್ ಸ್ಥಾನ ಪಡೆದಿದ್ದು ಪ್ರಸ್ತುತ ಉತ್ತಮ ಪ್ರದರ್ಶನ ನೀಡುತ್ತಿರುವ ಕೊಹ್ಲಿ ಸ್ಥಾನ ವಂಚಿತರಾಗಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ಸ್ಮಿತ್ ನನ್ನ ಹಾಗೂ ವಿರಾಟ್ ಕೊಹ್ಲಿ ನಡುವೆ ವೈಯಕ್ತಿಕವಾಗಿ ಯಾವುದೇ ದ್ವೇಷವಿಲ್ಲ. ಆಟಗಾರ ಮತ್ತು ನಾಯಕನಾಗಿ ಕೊಹ್ಲಿ ಅದ್ಭುತ. ಅಲ್ಲದೇ ಯಾವುದೇ ಆಟಗಾರರೊಂದಿಗೆ ವೈರತ್ವ ಸಾಧಿಸುವುದನ್ನು ನಾನು ಇಷ್ಟಪಡುವುದಿಲ್ಲ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಭಾರತ ಪ್ರವಾಸ ಕೈಗೊಂಡಿತ್ತು. ಈ ಸರಣಿ ವೇಳೆ ಆಸೀಸ್ ನಾಯಕ ಹಾಗೂ ವಿರಾಟ್ ಕೊಹ್ಲಿ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿತ್ತು.