ಇಂದೋರ್: ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 293 ರನ್ ಗಳನ್ನು ಪೇರಿಸಿದ್ದು ಭಾರತಕ್ಕೆ ಗೆಲ್ಲಲು 294 ರನ್ ಗಳ ಗುರಿ ನೀಡಿದೆ.
ಇಂದೋರ್ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 293 ರನ್ ಗಳಿಸಿದೆ.
ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 42, ಪಿಂಚ್ 124, ಸ್ಟೀವನ್ ಸ್ಮಿತ್ 63, ಮ್ಯಾಕ್ಸ್ ವೇಲ್ 5, ಹೆಡ್ 4, ಹ್ಯಾಂಡ್ಸ್ ಕ್ಯೂಬ್ 3, ಸ್ಟೈನಿಸ್ ಅಜೇಯ 27 ರನ್ ಗಳಿಸಿದ್ದಾರೆ.
ಭಾರತ ಪರ ಜಸ್ ಪ್ರೀತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಹಾಗೂ ಚಹಾಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಪಡೆದಿದ್ದಾರೆ.