ಆಸ್ಟ್ರೇಲಿಯಾ ವಿರುದ್ಧದ ಕೊನೆಯ 2 ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಯ್ಕೆ
Published On :
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಭಾರತ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎನ್ಕೆ ಪ್ರಸಾದ್ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದರು. ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದು ಭಾರತ ಸರಣಿ ಕೈವಶ ಮಾಡಿಕೊಂಡಿದೆ. ಇನ್ನುಳಿದ ಎರಡು ಪಂದ್ಯಗಳನ್ನು ಗೆದ್ದರೇ ಆಸ್ಟ್ರೇಲಿಯಾವನ್ನು ಕ್ಲೀನ್ ಸ್ವೀಪ್ ಮಾಡಿದ ಸಾಧನೆ ಮಾಡಲಿದೆ.
ಭಾರತದ ಸ್ಟಾರ್ ಸ್ಪಿನ್ನರ್ ಗಳಾದ ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾಗೆ ಮೊದಲ ಮೂರು ಏಕದಿನ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಉಳಿದ ಎರಡು ಪಂದ್ಯಗಳಿಗೂ ಅವರಿಗೆ ವಿಶಾಂತ್ರಿ ನೀಡಲಾಗಿದೆ. ಇನ್ನು ಗಾಯಗೊಂಡು ಮೊದಲ ಮೂರು ಪಂದ್ಯಗಳಿಂದ ದೂರ ಉಳಿದಿದ್ದ ಅಕ್ಷರ್ ಪಟೇಲ್ ಕೊನೆಯ ಎರಡು ಪಂದ್ಯಗಳಿಗೆ ಆಯ್ಕೆಯಾಗಿದ್ದಾರೆ. 4ನೇ ಏಕದಿನ ಪಂದ್ಯ ಬೆಂಗಳೂರಿನಲ್ಲಿ 28ರಂದು ನಡೆಯಲಿದೆ. ಇನ್ನು ಐದನೇ ಪಂದ್ಯ ನಾಗಪುರದಲ್ಲಿ ಅಕ್ಟೋಬರ್ 1ರಂದು ನಡೆಯಲಿವೆ.
ಟೀಂ ಇಂಡಿಯಾ ಏಕದಿನ ತಂಡ
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ. ಕೆಎಲ್ ರಾಹುಲ್, ಎಂಎಸ್ ಧೋನಿ(ವಿಕೆಟ್ ಕೀಪರ್), ಮನೀಶ್ ಪಾಂಡ್ಯೆ, ಕೇದಾರ್ ಜಾದವ್, ಅಜಿಂಕ್ಯಾ ರಹಾನೆ, ಹಾರ್ದಿಕ್ ಪಾಂಡ್ಯಾ, ಕುಲ್ದೀಪ್ ಯಾದವ್, ಯಜುವೇಂದರ್ ಚಹಾಲ್, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಅಕ್ಷರ್ ಪಟೇಲ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

