ಬೆಂಗಳೂರು: ಏಕದಿನ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಬಲಿಷ್ಠ ತಂಡವಾಗಿ ಬೆಳೆಯುತ್ತಿದೆ. ನಾವು ಪಂದ್ಯ ಗೆಲ್ಲಬೇಕಾದರೆ 100ರಷ್ಟು ಶ್ರಮಿಸಬೇಕು ಎಂದು ಆಸ್ಟ್ರೇಲಿಯಾ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಆ್ಯರನ್ ಫಿಂಚ್ ಅಭಿಪ್ರಾಯಪಟ್ಟಿದ್ದಾರೆ.
ಇಂದೋರ್ ನಲ್ಲಿ ಟೀಂ ಇಂಡಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆ್ಯರನ್ ಫಿಂಚ್ ಶತಕ ಸಿಡಿಸಿದ್ದರು. ಇನ್ನು ತಂಡ 293 ರನ್ ಗಳಿಸಿದ್ದರು ಈ ಗುರಿಯನ್ನು ಭಾರತ ಸುಲಭವಾಗಿ ಗೆದ್ದಿತ್ತು. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವೆಬ್ ಸೈಟ್ ಗೆ ನೀಡಿದ ಸಂದರ್ಶನದಲ್ಲಿ ಅವರು ಈ ರೀತಿ ಹೇಳಿದ್ದಾರೆ.
ಭಾರತ ವಿರುದ್ಧ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಲು ಆಸ್ಟ್ರೇಲಿಯಾಗೆ ಸಾಧ್ಯವಾಗಲಿಲ್ಲ. ಹೀಗಾಗಿ ಎರಡು ತಂಡಗಳ ನಡುವೆ ಸ್ಪಷ್ಟವಾದ ವ್ಯತ್ಯಾಸ ಗೋಚರವಾಗುತ್ತಿದೆ ಎಂದರು.
ನಾಳೆ ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ನಾಲ್ಕನೇ ಏಕದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು ಭಾರತ ವಿರುದ್ಧ ಪಂದ್ಯ ಗೆಲ್ಲಲು ಆಸ್ಟ್ರೇಲಿಯಾ ಕಠಿಣಾಭ್ಯಸದಲ್ಲಿ ತೊಡಗಿದ್ದಾರೆ.