100ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ಅಪರೂಪದ ಸಾಧನೆ ಮಾಡಿದ ಡೇವಿಡ್ ವಾರ್ನರ್

ಆಸ್ಟ್ರೇಲಿಯಾ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ತಮ್ಮ 100ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿರುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ...
ಡೇವಿಡ್ ವಾರ್ನರ್
ಡೇವಿಡ್ ವಾರ್ನರ್
Updated on: 
ಬೆಂಗಳೂರು: ಆಸ್ಟ್ರೇಲಿಯಾ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ತಮ್ಮ 100ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿರುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ವಾರ್ನರ್ 102 ಎಸತೆಗಳಲ್ಲಿ ಭರ್ಜರಿ ಮೂರು ಸಿಕ್ಸರ್ ಹಾಗೂ 10 ಬೌಂಡರಿ ಸಿಡಿಸುವ ಮೂಲಕ ಶತಕ ಸಿಡಿಸಿದ್ದಾರೆ. 
2009ರಲ್ಲಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಾಣೆ ಮಾಡಿದ್ದ ಡೇವಿಡ್ ವಾರ್ನರ್ 100ನೇ ಏಕದಿನ ಪಂದ್ಯವಾಡಿದ 28ನೇ ಆಸ್ಟ್ರೇಲಿಯಾ ಕ್ರಿಕೆಟಿಗರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com