4 ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 21 ರನ್ ಗಳ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 4 ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 21 ರನ್ ಗಳ ಜಯ ಗಳಿಸಿದೆ.
4 ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 21 ರನ್ ಗಳ ಜಯ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 4 ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 21 ರನ್ ಗಳ ಜಯ ಗಳಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ 5 ವಿಕೆಟ್ ನಷ್ಟಕ್ಕೆ 334 ರನ್ ಗಳಿಸಿ ಭಾರತಕ್ಕೆ 335 ರನ್ ಗುರಿ ನೀಡಿತ್ತು. ಆಸ್ಟ್ರೇಲಿಯಾ ನೀಡಿದ್ದ 335 ರನ್ ಗಳ ಗುರಿ ಬೆನ್ನಟ್ಟಿದ ಭಾರತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ313 ರನ್ ಗಳನ್ನಷ್ಟೇ ಕಲೆ ಹಾಕಲು ಸಾಧ್ಯವಾಗಿ ಆಸ್ಟ್ರೇಲಿಯಾ ತಂಡದೆದುರು ಸೋಲೊಪ್ಪಿಕೊಂಡಿತು. 
ಭಾರತದ ಆರಂಭಿಕ ಆಟಗಾರರಾದ ಅಜಿಂಕ್ಯಾ ರೆಹಾನೆ ಹಾಗೂ ರೋಹಿತ್ ಶರ್ಮಾ 106 ರನ್ ಗಳ ಜೊತೆಯಾಟ ಆಡಿದರು, ಆದರೆ 53 ರನ್ ಗಳಿಸಿದ್ದ ಅಜಿಂಕ್ಯಾ ರೆಹಾನೆ 18 ನೇ ಓವರ್ ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ನತ್ತ ನಡೆದರು. ಇನ್ನು ರೋಹಿತ್ ಶರ್ಮಾ 65 ರನ್ ಗಳಿಸಿ ಔಟಾದರೆ ವಿರಾಟ್ ಕೋಹ್ಲಿ ಕೇವಲ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಹಾರ್ದಿಕ್ ಪಾಂಡ್ಯ (41), ಕೇದಾರ್ ಜಾಧವ್ (67) ಮನೀಷ್ ಪಾಂಡೆ (33) ಧೋನಿ (13) ಆಸ್ಟ್ರೇಲಿಯಾ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗದೇ ಔಟಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com