ನಾಯಕನಾಗಿ ಅತ್ಯಲ್ಪ ಅವಧಿಯಲ್ಲಿ 2,000 ರನ್ ಪೂರೈಸಿದ ವಿರಾಟ್ ಕೊಹ್ಲಿ

ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಇನ್ನೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on
ಬೆಂಗಳೂರು: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಇನ್ನೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಕೊಹ್ಲಿ 21 ರನ್‌ ಗಳಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ನಾಯಕನಾಗಿ ಅತಿ ಕಡಿಮೆ ಇನಿಂಗ್ಸ್‌ ಗಳಲ್ಲಿ 2000 ರನ್‌ ಪೂರೈಸಿದ ವಿಶ್ವದಾಖಲೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಪಂದ್ಯದಲ್ಲಿ 21 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರೂ, ಆದರೆ ವಿಶ್ವದಾಕಲೆ ನಿರ್ಮಿಸಲು ಅವರಿಗೆ ಇದೇ ರನ್ ಸಾಕಾಗಿತ್ತು. 
ಇದಕ್ಕೂ ಮೊದಲು ಈ ದಾಖಲೆ ದಕ್ಷಿಣ ಆಫ್ರಿಕಾ ತಂಡದ ನಾಯಕ ಎಬಿಡಿ ವಿಲಿಯರ್ಸ್‌ ಹೆಸರಿನಲ್ಲಿತ್ತು. ಇದಕ್ಕಾಗಿ ಡಿ ವಿಲಿಯರ್ಸ್‌ 41 ಇನಿಂಗ್ಸ್‌ ಗಳ ಕಾಲಾವಕಾಶ ತೆಗೆದುಕೊಂಡಿದ್ದರು.
ಸದ್ಯ ನಾಯಕನಾಗಿ 39 ಪಂದ್ಯಗಳಲ್ಲಿ ತಂಡ ಮುನ್ನಡೆಸಿರುವ ಕೊಹ್ಲಿ, ಒಟ್ಟು 198 ಪಂದ್ಯಗಳನ್ನಾಡಿದ್ದಾರೆ. 55.24ರ ಸರಾಸರಿಯಲ್ಲಿ ಬ್ಯಾಟಿಂಗ್ ನಡೆಸಿರುವ ಅವರು, 30 ಶತಕ, 45 ಅರ್ಧಶತಕದೊಂದಿಗೆ 8728 ರನ್‌ ಕಲೆ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com