ಆಸ್ಟ್ರೇಲಿಯಾ ತಂಡ ನೀಡಿದ್ದ 243 ರನ್ ಗಳ ಸಾಮಾನ್ಯ ಗುರಿಯನ್ನು ಕೊಹ್ಲಿ ಪಡೆ ಕೇವಲ 3 ವಿಕೆಟ್ ಗಳನ್ನು ಕಳೆದುಕೊಂಡು ಗುರಿ ಸಾಧಿಸಿತು. ಭಾರತದ ಆರಂಭಿಕರಾದ ಅಜಿಂಕ್ಯ ರಹಾನೆ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದರು. ರಹಾನೆ 74 ಎಸೆತಗಳಲ್ಲಿ 61 ರನ್ ಗಳನ್ನು ಸಿಡಿಸಿ ಕಾಲ್ಟರ್ ನೈಲ್ ಬೌಲಿಂಗ್ ನಲ್ಲಿ ಔಟ್ ಆದರು. ಆದರೆ ನಾಯಕ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಮ್ಮ ನೈಜ ಆಟದ ಮೂಲಕ ಮೈದಾನದ ಮೂಲೆ ಮೂಲೆಗೆ ಚೆಂಡನ್ನು ಅಟ್ಟಿದರು. ಆ ಮೂಲಕ ಭರ್ಜರಿ ಶತಕ ಸಿಡಿಸಿದರು. ಕೊಹ್ಲಿ ಮತ್ತು ರೋಹಿತ್ ಶರ್ಮಾ ಜೋಡಿ ಭಾರತ ತಂಡವನ್ನು ಗೆಲುವಿನ ಹೊಸ್ತಿಲಿಗೆ ತಂದು ನಿಲ್ಲಿಸಿತು.