ಜಾಕ್ ಕಾಲೀಸ್
ಕ್ರಿಕೆಟ್
ಚೆಂಡು ವಿರೂಪ ಪ್ರಕರಣ 'ಎಲ್ಲರಿಗೂ ಎಚ್ಚರಿಕೆಯ ಕರೆ ಘಂಟೆ': ಜಾಕ್ ಕಾಲೀಸ್
ಚೆಂಡು ವಿರೂಪ ಪ್ರಕರಣದಿಂದಾಗಿ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್, ಮಾಜಿ ಉಪನಾಯಕ ಡೇವಿಡ್ ವಾರ್ನರ್ ಹಾಗೂ ಬೆನ್ ಕ್ರಾಫ್ಟ್ ನಿಷೇಧದ ಶಿಕ್ಷೆಗೆ ಗುರಿಯಾಗಿದ್ದು...
ಚೆಂಡು ವಿರೂಪ ಪ್ರಕರಣದಿಂದಾಗಿ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್, ಮಾಜಿ ಉಪನಾಯಕ ಡೇವಿಡ್ ವಾರ್ನರ್ ಹಾಗೂ ಬೆನ್ ಕ್ರಾಫ್ಟ್ ನಿಷೇಧದ ಶಿಕ್ಷೆಗೆ ಗುರಿಯಾಗಿದ್ದು ಇದು ಜಗತ್ತಿನ ಎಲ್ಲಾ ಆಟಗಾರರಿಗೂ ಎಚ್ಚರಿಕೆಯ ಕರೆ ಘಂಟೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಕ್ ಕಾಲೀಸ್ ಹೇಳಿದ್ದಾರೆ.
ಜೆಂಟಲ್ ಮ್ಯಾನ್ ಗೇಮ್ ಕ್ರಿಕೆಟ್ ನಲ್ಲಿ ತನ್ನದೇ ಆದ ನಿಯಮಗಳಿವೆ ಅವುಗಳನ್ನು ಯಾರು ಮೀರಬಾರದು ಒಂದು ವೇಳೆ ಮೀರಿದರೆ ಇಂತಹ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಆಫ್ರಿಕಾದ ಖ್ಯಾತ ಕ್ರಿಕೆಟಿಗ ಜಾಕ್ ಕಾಲೀಸ್ ಹೇಳಿದ್ದಾರೆ.
ಕಳೆದ ಕೆಲ ದಿನಗಳಿಂದ ಕೆಲ ಮಾಧ್ಯಮಗಳು ಚೆಂಡು ವಿರೂಪ ಪ್ರಕರಣದ ಬಗ್ಗೆ ವರದಿಗಳನ್ನು ಪ್ರಸಾರ ಮಾಡಿವೆ. ಈ ಪ್ರಕರಣವನ್ನು ಮಾಧ್ಯಮಗಳು ಹೆಚ್ಚಾಗಿ ಬಿಂಬಿಸಿದ್ದವು. ಇದರ ಬಗ್ಗೆ ನಾನು ಏನು ಹೇಳುವುದಿಲ್ಲ ಆದರೆ ಅಂತಾರಾಷ್ಟ್ರೀಯ ಕ್ರಿಕೆಟಿಗರು ಮಾತ್ರ ಎಚ್ಚೆತ್ತುಕೊಳ್ಳಲು ಇದೊಂದು ಕರೆ ಘಂಟೆ ಎಂದು ಹೇಳಿದರು.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಚೆಂಡು ವಿರೂಪ ಪ್ರಕರಣದಲ್ಲಿ ಭಾಗಿಯಾಗಿದ್ದ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ಗೆ ಒಂದು ವರ್ಷ ಹಾಗೂ ಬೆನ್ ಕ್ರಾಫ್ಟ್ ಗೆ 9 ತಿಂಗಳ ನಿಷೇಧ ಹೇರಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ