ಪಿಒಕೆಯನ್ನು ಭಾರತ ಆಕ್ರಮಿತ ಕಾಶ್ಮೀರ ಎಂದಿದ್ದ ಅಫ್ರಿದಿಗೆ ಭಾರತ ಕ್ರಿಕೆಟ್ ದಿಗ್ಗಜರಿಂದ ಖಡಕ್ ಉತ್ತರ

ಜಮ್ಮು ಕಾಶ್ಮೀರ ವಿಚಾರದಲ್ಲಿ ಶಾಹೀದ್ ಅಫ್ರಿದಿ ಮಾಡಿದ್ದ ವಿವಾದಾತ್ಮಕ ಟ್ವೀಟ್ ಸಂಬಂಧ ಭಾರ್ತೀಯ ಕ್ರಿಕೆಟಿಗರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on: 
ನವದೆಹಲಿ: ಜಮ್ಮು ಕಾಶ್ಮೀರ ವಿಚಾರದಲ್ಲಿ ಶಾಹೀದ್ ಅಫ್ರಿದಿ ಮಾಡಿದ್ದ ವಿವಾದಾತ್ಮಕ ಟ್ವೀಟ್ ಸಂಬಂಧ ಭಾರತೀಯ ಕ್ರಿಕೆಟಿಗರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.
"ಭಾರತ ಆಕ್ರಮಿತ ಕಾಶ್ಮೀರದಲ್ಲಿ ಅಮಾಯಕರ ಹತ್ಯೆ ನಡೆಯುತ್ತಿದೆ" ಎಂದು ಟ್ವೀಟ್ ಮಾಡಿದ್ದ ಅಫ್ರಿದಿ ಹೇಳಿಕೆಗೆ ಭಾರತದ ಗೌತಮ್ ಗಂಭೀರ್ ತಿರುಗೇಟು ನೀಡಿದ್ದರು.
ಇದೀಗ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ,  ಮೊದಲ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್, ಸುರೇಶ್ ರೈನಾ  ಸಹ ಖಾರವಾಗಿ ಪ್ರತಿಕ್ರಯಿಸಿದ್ದಾರೆ.
"ಅಫ್ರಿದಿ ಜತೆ ನನಗೆ ಉತ್ತಮ ಸ್ನೇಹವಿದೆ, ಆದರೆ ಭಾರತಕ್ಕೆ ಅವಹೇಳನ ಮಾಡುವ ಯಾವ ಹೇಳಿಕೆಯನ್ನೂ ನಾನು ಬೆಂಬಲಿಸುವುದಿಲ್ಲ" ಎಂದು ಕೊಹ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com