ದುಬೈ: ಭಾರತ-ಪಾಕಿಸ್ತಾನ ನಡುವಿನ ರಾಜಕೀಯ ಬಿಕ್ಕಟ್ಟಿನಿಂದಾಗಿ ಭಾರತದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ ಟೂರ್ನಿ ಯುನೈಟೆಡ್ ಅರಬ್ ಎಮಿರೈಟ್ಸ್(ಯುಎಇ)ಗೆ ಸ್ಥಳಾಂತರಗೊಂಡಿದೆ.
ಇದೇ ಸೆಪ್ಟೆಂಬರ್ 13ರಿಂದ 28ರವರೆಗೆ 14ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್ ಉದ್ದೇಶಪೂರ್ವಕವಾಗಿಯೇ ತಟಸ್ಥ ಸ್ಥಳದಲ್ಲಿ ಟೂರ್ನಿ ಆಯೋಜಿಸಲು ನಿರ್ಧಾರಕ್ಕೆ ಬಂದಿದೆ ಎಂದು ಎಸಿಸಿ ಹಾಗೂ ಪಿಸಿಬಿ ಅಧ್ಯಕ್ಷ ನಜಾಂ ಸೇಥಿ ಹೇಳಿದ್ದಾರೆ.
ಈ ಭಾರಿ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ತಂಡಗಳು ಕಣ್ಣಕ್ಕಿಳಿಯಲಿವೆ. 12 ಟೂರ್ನಿಗಳು ಏಕದಿನ ಟೂರ್ನಿಗಳಾಗಿತ್ತು. ಕಳೆದ ಬಾರಿ ನಡೆದ 2016ನೇ ಏಷ್ಯಾಕಪ್ ಟೂರ್ನಿಯು ಟಿ20 ಪಂದ್ಯಾವಳಿಯಾಗಿ ಬದಲಾಗಿತ್ತು.
ಎರಡು ವರ್ಷಗಳ ಹಿಂದೆ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು ರೋಚಕವಾಗಿ ಮಣಿಸಿ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು.