ಚೆನ್ನೈ: ಮ್ಯಾಚ್ ಫಿಕ್ಸಿಂಗ್ ಆರೋಪದಿಂದ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಿಂದ ನಿಷೇಧಗೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ 11ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದ್ದು ಎರಡು ವರ್ಷಗಳ ಬಳಿಕ ತವರಿನಲ್ಲಿ ಮೊದಲ ಪಂದ್ಯವನ್ನು ಆಡಲಿದೆ.
ಚೇಪಾಕ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ತವರಿನಲ್ಲಿ ಜಯ ಓಟ ಮುಂದುವರಿಸಲು ಚೆನ್ನೈ ಕಾತರಿಸುತ್ತಿದೆ.
ಸಿಎಸ್‌ಕೆ ಅಭ್ಯಾಸ ಪಂದ್ಯಕ್ಕೇ ಸುಮಾರು 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಇನ್ನು ಇಂದಿನ ಪಂದ್ಯದಲ್ಲಿ ಧೋನಿ ಹಾಗೂ ತಂಡವನ್ನು ಸ್ವಾಗತಿಸಲು ತುದಿಗಾಗಲ್ಲಿ ನಿಂತಿದ್ದಾರೆ.
ಇನ್ನು ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ನಲ್ಲಿ ಶುಭಾರಂಭ ಮಾಡಿತ್ತು.