ವಿರಾಟ್ ಕೊಹ್ಲಿ, ಮಿಥಾಲಿ ರಾಜ್
ಕ್ರಿಕೆಟ್
ವಿರಾಟ್ ಕೊಹ್ಲಿ, ಮಿಥಾಲಿ ರಾಜ್‌ಗೆ ವಿಸ್ಡನ್ ವರ್ಷದ ಕ್ರಿಕೆಟಿಗ ಗೌರವ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಅವರಿಗೆ ವಿಸ್ಡನ್ ವರ್ಷದ ಕ್ರಿಕೆಟಿಗ ಗೌರವ ಲಭಿಸಿದೆ...
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಅವರಿಗೆ ವಿಸ್ಡನ್ ವರ್ಷದ ಕ್ರಿಕೆಟಿಗ ಗೌರವ ಲಭಿಸಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ವಿರಾಟ್ ಕೊಹ್ಲಿ ಹಾಗೂ ಕಳೆದ ಮಹಿಳಾ ವಿಶ್ವಕಪ್ ಫೈನಲ್ ವರೆಗೂ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಿಥಾಲಿ ರಾಜ್ ಅವರನ್ನು ವರ್ಷದ ಕ್ರಿಕೆಟಿಗ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಐವರು ಆಟಗಾರರ ಪೈಕಿ ಕೊಹ್ಲಿ ಹಾಗೂ ಮಿಥಾಲಿ ರಾಜ್ ಸಹ ಆಯ್ಕೆಯಾಗಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಐದು ಟೆಸ್ಟ್ ಶತಕಗಳಲ್ಲಿ ಮೂರು ದ್ವಿಶತಕಗಳು ಕೂಡಿವೆ. ಈ ಕಾರಣದಿಂದಾಗಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದ ವಿಸ್ಡನ್ ಸಂಪಾದಕ ಲಾರೆನ್ಸ್ ಬೂತ್ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ