ಈ ಪಂದ್ಯ ಗೆಲ್ಲುವ ಮೂಲಕ ಮಿಥಾಲಿ ರಾಜ್ ನೇತೃತ್ವದ ತಂಡ 2-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವ 9 ವಿಕೆಟ್ ಗಳ ನಷ್ಟಕ್ಕೆ 201 ರನ್ ಕಲೆ ಹಾಕಿತ್ತು. ಇಂಗ್ಲೆಂಡ್ ತಂಡ ನೀಡಿದ್ದ ಗುರಿಯನ್ನು ಸುಲಭವಾಗಿ ತಲುಪಿದ ಭಾರತ 45.2 ಓವರ್ ಗಳಿಗೆ 2 ವಿಕೆಟ್ ಕಳೆದುಕೊಂಡು 202 ರನ್ ಗಳನ್ನು ಗಳಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ.