ಭಾರತದ ವಿರುದ್ಧ ಆಡಿದರೆ ವಾರ್ನರ್, ಸ್ಮಿತ್ ಸ್ಥಳೀಯರೇ ವಿರೋಧಿಸುತ್ತಾರೆ: ಚಾಪೆಲ್

ಚೆಂಡು ವಿರೂಪಗೊಳಿಸಿದ್ದ ಪ್ರಕರಣದಲ್ಲಿ ಒಂದು ವರ್ಷ ನಿಷೇಧ ವಿಧಿಸಿರುವುದರಿಂದಾಗಿ ಮುಂಬರುವ ಭಾರತ-ಆಸ್ಟ್ರೇಲಿಯಾ ನಡುವಿನ ಸರಣಿಗೆ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅಲಭ್ಯರಾಗಿದ್ದಾರೆ.
ಸ್ಮಿತ್
ಸ್ಮಿತ್
ಚೆಂಡು ವಿರೂಪಗೊಳಿಸಿದ್ದ ಪ್ರಕರಣದಲ್ಲಿ ಒಂದು ವರ್ಷ ನಿಷೇಧ ವಿಧಿಸಿರುವುದರಿಂದಾಗಿ ಮುಂಬರುವ ಭಾರತ-ಆಸ್ಟ್ರೇಲಿಯಾ ನಡುವಿನ ಸರಣಿಗೆ  ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅಲಭ್ಯರಾಗಿದ್ದಾರೆ. ಈ ಬಗ್ಗೆ ಆಸ್ಟ್ರೇಲಿಯಾದ ಮಾಜಿ ನಾಯಕ ಗ್ರೇಗ್ ಚಾಪೆಲ್ ಸಂತಸ ವ್ಯಕ್ತಪಡಿಸಿದ್ದು,  ಒಂದು ವೇಳೆ ಅವಕಾಶ ಇದ್ದಿದ್ದರೆ ತಮ್ಮದೇ ನೆಲದಲ್ಲಿ ಇಬ್ಬರನ್ನೂ ಜನ ವಿರೋಧಿಸುತ್ತಿದ್ದರು ಎಂದು ಹೇಳಿದ್ದಾರೆ. 
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ್ದರಲ್ಲಿ ಶಾಮೀಲಾಗಿದ್ದಕ್ಕಾಗಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅವರಿಗೆ ಒಂದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿಷೇಧ ವಿಧಿಸಲಾಗಿದೆ.  ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೇಗ್ ಚಾಪೆಲ್, ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಲಭ್ಯವಾಗಿದ್ದಿದ್ದರೆ ತಮ್ಮದೇ ನೆಲದಲ್ಲಿ ಇಬ್ಬರನ್ನೂ ಜನ ವಿರೋಧಿಸುತ್ತಿದ್ದರು ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com