ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ಪಂಜಾಬ್ ತಂಡ ನಿಗದಿತ ಓವರ್ ನಲ್ಲಿ 155 ರನ್ ಗಳನ್ನು ಪೇರಿಸಿತ್ತು. 156 ರನ್ ಗಳ ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಸ್ಫೋಟಕ ಬ್ಯಾಟ್ಸ್ ಮನ್ ಬ್ರೆಂಡನ್ ಮೆಕ್ಕಲಂ ಶೂನ್ಯಕ್ಕೆ ಔಟಾದರು. ನಂತರ ಜತೆಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಹೊದಗಿಸಿದರು.