ಐಪಿಎಲ್ 2018: ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದ ಬೆಂಗಳೂರು ತಂಡ ಬೌಲಿಂಗ್ ಆಯ್ಕೆ!

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್ ಸಿಬಿ ವರ್ಸಸ್ ಮುಂಬೈ ಇಂಡಿಯನ್ಸ್ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಆರ್ ಸಿಬಿ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆರ್ ಸಿಬಿ ಗೆ ಇದು ಮಹತ್ವದ ಪಂದ್ಯವಾಗಿದ್ದು, ತಾನಾಡಿರುವ ಮೂರು ಪಂದ್ಯಗಳಲ್ಲಿ 1 ಪಂದ್ಯದಲ್ಲಿ ಮಾತ್ರ ಆರ್ ಸಿಬಿ ಗೆದ್ದಿದ್ದು, ಉಳಿದರೆಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇನ್ನು ಮುಂಬೈ ಇಂಡಿಯನ್ಸ್ ಗೆ ಇದು ನಾಲ್ಕನೇ ಪಂದ್ಯವಾಗಿದ್ದು, ಆಡಿರುವ ಮೂರು ಪಂದ್ಯಗಳಲ್ಲೂ ಸೋಲು ಕಂಡಿದೆ.
ಹೀಗಾಗಿ ಸರಣಿಯಲ್ಲಿ ತನ್ನ ಸೋಲಿನ ಸರಪಳಿ ಕಳಚಿಕೊಳ್ಳಲು ಮುಂಬೈ ತಂಡ ಗೆಲುವಿಗಾಗಿ ಶತಾಯಗತಾಯ ಪ್ರಯತ್ನಿಸಲಿದೆ.
ತಂಡಗಳು ಇಂತಿದೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಕ್ವಿಂಟನ್ ಡಿ ಕೊಕ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಮನ್ ದೀಪ್ ಸಿಂಗ್, ಕೋರಿ ಆಂಡರ್ಸನ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಕ್ರಿಸ್ ವೋಕ್ಸ್, ಉಮೇಶ್ ಯಾದವ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್
ಮುಂಬೈ ಇಂಡಿಯನ್ಸ್ 
 ಸೂರ್ಯಕುಮಾರ್ ಯಾದವ್, ಎವಿನ್ ಲೆವಿಸ್, ಇಷಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಮಿಚೆಲ್ ಮ್ಯಾಕ್ಕ್ಲೆನಾಘನ್, ಮಾಯಾಂಕ್ ಮಾರ್ಕೆಂಡೆ, ಜಾಸ್ ಪ್ರೀತ್ ಬುಮ್ರಾ, ಮುಸ್ತಫಿಜರ್ ರಹಮಾನ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com