ಪುಣೆ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿದ್ದು ಚೆನ್ನೈ ಅಭಿಮಾನಿಗಳ ಅಭಿಮಾನ ತಾರಕಕ್ಕೇರಿದೆ.
ಪುಣೆಯಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಮೈದಾನಕ್ಕೆ ಬಂದ ಎಂಎಸ್ ಧೋನಿಗೆ ಅಭಿಮಾನಿಯೊಬ್ಬ ಕಾಲಿಗೆ ಬಿದ್ದಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಈ ಪಂದ್ಯದಲ್ಲಿ ಶೇನ್ ವಾಟ್ಸನ್ ಅಬ್ಬರದ ಶತಕದ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ 64 ರನ್ ಗಳಿಂದ ಜಯ ಸಾಧಿಸಿತು.
ಮ್ಯಾಚ್ ಫಿಕ್ಸಿಂಗ್ ಆರೋಪದ ಹಿನ್ನೆಲೆಯಲ್ಲಿ ಎರಡು ವರ್ಷ ನಿಷೇಧಕ್ಕೆ ಒಳಗಾಗಿದ್ದ ಸಿಎಸ್ಕೆ ತಂಡ ಪ್ರಸ್ತುತ ಆವೃತ್ತಿಯಿಂದ ಐಪಿಎಲ್ ಗೆ ಸೇರ್ಪಡೆಗೊಂಡಿದೆ. ಸದ್ಯ ತಮಿಳುನಾಡಿನಲ್ಲಿ ಕಾವೇರಿ ಪ್ರತಿಭಟನೆಗಳು ತೀವ್ರಗೊಂಡಿದ್ದರಿಂದ ಚೆನ್ನೈನಲ್ಲಿನ ಎಲ್ಲಾ ಪಂದ್ಯಗಳನ್ನು ಪುಣೆಗೆ ಸ್ಥಳಾಂತರ ಮಾಡಲಾಗಿದೆ.