ಜಗತ್ತಿನಲ್ಲಿ ಅತೀ ಹೆಚ್ಚು ಜನ ಸೇರುವ ಕ್ರೀಡಾಂಗಣ ಚಿನ್ನಸ್ವಾಮಿ: ಎಬಿಡಿ ವಿಲಿಯರ್ಸ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ...
ಎಬಿಡಿ ವಿಲಿಯರ್ಸ್
ಎಬಿಡಿ ವಿಲಿಯರ್ಸ್
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. 
ಇನ್ನು ಪಂದ್ಯದಲ್ಲಿ ಎಬಿಡಿ ವಿಲಿಯರ್ಸ್ 39 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 10 ಬೌಂಡರಿಗಳು ಸೇರಿದಂತೆ ಅಜೇಯ 90 ರನ್ ಗಳಿಸಿ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನ ಮೂಲಕ ಟೂರ್ನಿಯಲ್ಲಿ ಆರ್ಸಿಬಿ 2ನೇ ಗೆಲುವು ದಾಖಲಿಸಿದೆ. 
ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಪಂದ್ಯ ಪುರಷ ಪ್ರಶಸ್ತಿ ಪಡೆದ ನಂತರ ಮಾತನಾಡಿದ ಎಬಿಡಿ ವಿಲಿಯರ್ಸ್ ಅವರು ಕಳೆದ ಎರಡು ಇನ್ನಿಂಗ್ಸ್ ನಲ್ಲಿ ನಾನು ವೈಫಲ್ಯ ಅನುಭವಿಸಿದ್ದೆ. ಆದರೆ ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇನೆ. ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದಾರೆ. ಜಗತ್ತಿನಲ್ಲಿ ಅತೀ ಹೆಚ್ಚು ಜನ ಸೇರುವ ಕ್ರೀಡಾಂಗಣ ಚಿನ್ನಸ್ವಾಮಿ ಎಂದು ಹೇಳಿದ್ದಾರೆ. 
ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದಿದ್ದ ಆರ್ಸಿಬಿ ಅಭಿಮಾನಿಗಳ ಮಧ್ಯೆ ಆಡುವುದಕ್ಕೆ ಇಷ್ಟಪಡುತ್ತೇನೆ. ಪ್ರತಿಯೊಂದು ಪಂದ್ಯದಲ್ಲೂ ನಮಗೆ ಬೆಂಬಲ ನೀಡುತ್ತಿದ್ದಾರೆ ಎಂದು ಎಬಿಡಿ ವಿಲಿಯರ್ಸ್ ಹೇಳಿದ್ದಾರೆ. 
ಗೆಲುವಿಗಾಗಿ 175 ರನ್ ​ಗಳ ಗುರಿ ಬೆನ್ನು ಹತ್ತಿದ ರಾಯಲ್​ ಚಾಲೆಂಜರ್ಸ್​ ತಂಡ ಡಿವಿಲಿಯರ್ಸ್​ ಬಾರಿಸಿದ ಬಿರುಸಿನ ಅರ್ಧ ಶತಕ(90) ನೆರವಿನೊಂದಿಗೆ ಇನ್ನೂ ಎರಡು ಓವರ್​ಗಳು ಬಾಕಿ ಇರುವಾಗಲೇ ಗೆಲುವಿನ ದಡ ಸೇರಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com