ಯಶಸ್ವಿ ಆಲ್ ರೌಂಡರ್ ಎನಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ನಿನ್ನೆ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಬೇಕಿತ್ತು. ಹೈದರಾಬಾದ್ ನೀಡಿದ ಅಲ್ಪಮೊತ್ತದ ಗುರಿಯನ್ನು ಬೆನ್ನಟ್ಟಿದ ಮುಂಬೈ ತಂಡ ಆರಂಭಿಕ ಆಘಾತ ಎದುರಿಸಿತು. ಜತೆಗೆ ಬಲಿಷ್ಠ ಬ್ಯಾಟಿಂಗ್ ಪಡೆ ದಿಢೀರ್ ಕುಸಿತ ಕಂಡಿತು. ಈ ವೇಳೆ ಬ್ಯಾಟಿಂಗ್ ಗೆ ಬಂದ ಹಾರ್ದಿಕ್ ಪಾಂಡ್ಯ 3 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇದರಿಂದ ರೊಚ್ಚಿಗೆದ್ದ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.