ಕನ್ನಡಿಗ ರಾಹುಲ್ ದ್ರಾವಿಡ್‌ಗೆ ದ್ರೋಣಾಚಾರ್ಯ, ಕೊಹ್ಲಿಗೆ ಖೇಲ್ ರತ್ನ ಪುರಸ್ಕಾರಕ್ಕೆ ಬಿಸಿಸಿಐ ಶಿಫಾರಸು

ಕ್ರೀಡಾ ಕ್ಷೇತ್ರದಲ್ಲಿ ತೋರಿದ ಜೀವಮಾನ ಸಾಧನೆ ಪರಿಗಣಿಸಿ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಅಂಡರ್ 19 ತಂಡದ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್...
ರಾಹುಲ್ ದ್ರಾವಿಡ್-ವಿರಾಟ್ ಕೊಹ್ಲಿ
ರಾಹುಲ್ ದ್ರಾವಿಡ್-ವಿರಾಟ್ ಕೊಹ್ಲಿ
Updated on
ಕೋಲ್ಕತ್ತಾ: ಕ್ರೀಡಾ ಕ್ಷೇತ್ರದಲ್ಲಿ ತೋರಿದ ಜೀವಮಾನ ಸಾಧನೆ ಪರಿಗಣಿಸಿ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಅಂಡರ್ 19 ತಂಡದ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಪ್ರತಿಷ್ಠಿತ ದ್ರೋಣಾಚಾರ್ಯ ಪ್ರಶಸ್ತಿ ಹಾಗೂ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪುರಸ್ಕಾರವನ್ನು ನೀಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶಿಫಾರಸು ಮಾಡಿದೆ. 
ಇನ್ನು ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ ಅವರಿಗೆ ಧ್ಯಾನ್ ಚಂದ್ ಪುರಸ್ಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಬಿಸಿಸಿಐ ಆಡಳಿತಾಧಿಕಾರಿಗಳ ಸಮಿತಿ(ಸಿಒಎ) ಮುಖ್ಯಸ್ಥ ವಿನೋದ್ ರಾಯ್ ಸ್ಪಷ್ಟಪಡಿಸಿದ್ದಾರೆ. 
ಬಿಸಿಸಿಐ ಎರಡನೇ ಬಾರಿಗೆ ಖೇಲ್ ರತ್ನ ಪ್ರಶಸ್ತಿಗೆ ವಿರಾಟ್ ಕೊಹ್ಲಿ ಅವರ ಹೆಸರನ್ನು ಶಿಫಾರಸು ಮಾಡಿದೆ. ಟೀಂ ಇಂಡಿಯಾದ ಅಂಡರ್ 19 ತಂಡ ವಿಶ್ವಕಪ್ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟ ತಂಡಕ್ಕೆ ತರಬೇತಿ ನೀಡಿ ಯಶಸ್ವಿಯಾಗಿ ಮುನ್ನಡೆಸಿದ್ದಕ್ಕಾಗಿ ದ್ರಾವಿಡ್ ಅವರ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com