ಕ್ರಿಕೆಟ್

ಚೆನ್ನೈನ ಸತತ ಗೆಲುವಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸತತ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್ ತಂಡ ಬ್ರೇಕ್ ಹಾಕಿದೆ...

ಚೆನ್ನೈನ ಸತತ ಗೆಲುವಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್
ಮುಂಬೈ ಇಂಡಿಯನ್ಸ್
Published On :
ಪುಣೆ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸತತ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್ ತಂಡ ಬ್ರೇಕ್ ಹಾಕಿದೆ. 
ಪುಣೆಯಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 8 ವಿಕೆಟ್ ಗಳಿಂದ ಜಯ ಗಳಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 169 ರನ್ ಪೇರಿಸಿತ್ತು. 170 ರನ್ ಗಳ ಗುರಿ ಪಡೆದ ಮುಂಬೈ ಇಂಡಿಯನ್ಸ್ ಇನ್ನು 2 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.
ಚೆನ್ನೈ ಪರ ಅಂಬಟ್ಟಿ ರಾಯುಡು 46, ಸುರೇಶ್ ರೈನಾ 75 ಮತ್ತು ಎಂಎಸ್ ಧೋನಿ 26 ರನ್ ಗಳಿಸಿದ್ದಾರೆ, ಮುಂಬೈ ಬೌಲಿಂಗ್ ನಲ್ಲಿ ಮೇಘ್ಲಾಗನ್ ಮತ್ತು ಕೃನಾಲ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದಿದ್ದಾರೆ. 

ಮುಂಬೈ ಪರ ಸೂರ್ಯಕುಮಾರ್ ಯಾದವ್ 44, ಲೆವಿಸ್ 47 ಮತ್ತು ರೋಹಿತ್ ಶರ್ಮಾ ಅಜೇಯ 56 ರನ್ ಬಾರಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.