ನವದೆಹಲಿ: ಶ್ರೇಯಸ್ ಅಯ್ಯರ್(ಅಜಯ 93) ಹಾಗೂ ಪೃಥ್ವಿ ಶಾ(62) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 55 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಂದು ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡ, ನಾಯಕ ಶ್ರೇಯಸ್ ಅಯ್ಯರ್ ಅವರ ಅಬ್ಬರದಾಟದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 219 ರನ್ ಗಳ ಬೃಹತ್ ಮೊತ್ತ ಸೇರಿಸಿತು.
ಗೆಲುವಿಗೆ 220 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಕೆಕೆಆರ್ ತಂಡ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 164 ರನ್ ಗಳಿಸುವ ಮೂಲಕ ಡಿಡಿ ವಿರುದ್ಧ ಮುಖಭಂಗ ಅನುಭವಿಸಿತು.
ಕೆಕೆಆರ್ ಪರ ಪಿಯೂಷ್ ಚಾವ್ಲ, ಶಿವಮ್ ಮವಿ ಹಾಗೂ ಆಂಡ್ರೆ ರೆಸೆಲ್ ತಲಾ ಒಂದೊಂದು ವಿಕೆಟ್ ಪಡೆದರು. ಉಳಿದಂತೆ ಮ್ಯಾಕ್ಸ್ವೆಲ್ ರನೌಟ್ ಆದರು.
ಡಿಡಿ ಪರ ಟ್ರೆಂಟ್ ಬೋಲ್ಟ್, ಗ್ಲೇನ್ ಮ್ಯಾಕ್ಸ್ವೆಲ್, ಅವೇಶ್ ಖಾನ್ ಹಾಗೂ ಅಮಿತ್ ಮಿಶ್ರಾ ತಲಾ ಎರಡು ವಿಕೆಟ್ ಪಡೆದರು.