ಟೀಂ ಇಂಡಿಯಾಗೆ ಸಂಕಷ್ಟ: ಲಾರ್ಡ್ಸ್ ಟೆಸ್ಟ್‌ಗೂ ಬುಮ್ರಾ ಅಲಭ್ಯ

ಐರ್ಲೆಂಡ್ ವಿರುದ್ಧದ ಟಿ20 ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ...
ಜಸ್ ಪ್ರೀತ್ ಬುಮ್ರಾ
ಜಸ್ ಪ್ರೀತ್ ಬುಮ್ರಾ
Updated on: 
ಲಂಡನ್: ಐರ್ಲೆಂಡ್ ವಿರುದ್ಧದ ಟಿ20 ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ. 
ಪಂದ್ಯದಲ್ಲಿ ಬುಮ್ರಾ ಅವರ ಎಡ ಕೈಗೆ ಗಾಯವಾಗಿತ್ತು. ಈ ಗಾಯದಿಂದ ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಲಾರ್ಡ್ಸ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎಂದು ತಂಡದ ಬೌಲಿಂಗ್ ಕೋಚ್ ಭರತ್ ಅರುಣ್ ತಿಳಿಸಿದ್ದಾರೆ. 
ಬುಮ್ರಾ ಕ್ಷಮತೆಯೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಆದರೆ ಅವರನ್ನು ಈ ಪರಿಸ್ಥಿತಿಯಲ್ಲಿ ಆಟಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ಕೈಗೆ ಹಾಕಿದ ಪ್ಲಾಸ್ಟರ್ ಮೊದಲಿಗೆ ತೆಗೆಯಬೇಕಾಗಿದೆ. ಆ ನಂತರ ತಂಡಕ್ಕೆ ಆಯ್ಕೆ ಮಾಡಲಾಗುವುದು ಎಂದು ಭರತ್ ಅರುಣ್ ತಿಳಿಸಿದ್ದಾರೆ. 
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬುಮ್ರಾ ಅವರ ಗಾಯ ನಿರೀಕ್ಷೆಗಿಂತಲೂ ನಿಧಾನವಾಗಿ ಶಮನಗೊಳ್ಳುತ್ತಿರುವ ಕಾರಣ ಅವರು ಲಾರ್ಡ್ಸ್ ಟೆಸ್ಟ್ ಗೆ ಲಭ್ಯರಿರುವುದಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com