ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಒಂದೇ ವಾರದಲ್ಲಿ ಅಗ್ರ ಪಟ್ಟದಿಂದ ಕೆಳಗಿಳಿದ ವಿರಾಟ್ ಕೊಹ್ಲಿ!

ಇಂಗ್ಲೇಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಬಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ನ ನಂ. 1 ಸ್ಥಾನದಿಂದ ಕೆಳಗಿಳಿದಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ದುಬೈ: ಇಂಗ್ಲೇಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಬಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ನ ನಂ. 1 ಸ್ಥಾನದಿಂದ ಕೆಳಗಿಳಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಅದ್ಭುತ ಆಟ ಪ್ರದರ್ಶಿಸಿದ್ದ ಕೊಹ್ಲಿ ಟೆಸ್ಟ್ ಬ್ಯಾಟಿಂಗ್​ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನ ಪಡೆದಿದ್ದರು. ಇದೀಗ ಎರಡನೇ ಟೆಸ್ಟ್ ನಲ್ಲಿ ಕಳಪೆ ಪ್ರದರ್ಶನ ನಿಡುವ ಮೂಲಕ ಒಂದೇ ವಾರದಲ್ಲಿ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.
ಕೊಹ್ಲಿ ಕೈಜಾರಿದ ನಂ.1  ಪಟ್ಟ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಪಾಲಿಗೆ ಒಲಿದಿದೆ. 
ಆರಂಭಿಕ ಟೆಸ್ಟ್ ಪಂದ್ಯದ ಬಳಿಕ 934 ಅಂಕದೊಡನೆ ಮೊದಲ ಸ್ಥಾನ ಪಡೆದಿದ್ದ ಕೊಹ್ಲಿ ಇದೀಗ 15 ಅಂಕ ಕಳೆದುಕೊಂಡು ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಪ್ರಸ್ತುತ ಕೊಹ್ಲಿ 919  ಅಂಕ ಹೊಂದಿದ್ದಾರೆ.
ಇನ್ನು  ಜೋ ರೂಟ್, ಕೇನ್​ ವಿಲಿಯಮ್ಸ್, ಡೇವಿಡ್​ ವಾರ್ನರ್ ಕ್ರಮವಾಗಿ 3, 4 ಹಾಗೂ  5ನೇ ಸ್ಥಾನ ಗಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com