'ನನ್ನ ಕೈಯಲ್ಲಿ ಏನಿದೆ' ಅಭಿಮಾನಿಗಳಿಗೆ ವಿರಾಟ್ ಕೊಹ್ಲಿಯ ಭಾವೋದ್ವೇಗದ ಉತ್ತರ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಸೋಲು ಮತ್ತು ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳ ಸೋಲಿನಿಂದ ಅಭಿಮಾನಿಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on
ಲಂಡನ್(ಇಂಗ್ಲೆಂಡ್): ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಸೋಲು ಮತ್ತು ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳ ಸೋಲಿನಿಂದ ಅಭಿಮಾನಿಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಭಾವೋದ್ವೇಗದ ಉತ್ತರ ನೀಡಿದ್ದಾರೆ. 
ವಿರಾಟ್ ಕೊಹ್ಲಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ, ಕೆಲವು ಸಲ ನಾವೆಲ್ಲ ಸೋಲನುಭವಿಸುತ್ತೇವೆ. ಅದರಿಂದ ನಾವೆಲ್ಲ ಬಹಳಷ್ಟು ಕಲಿಯುತ್ತೇವೆ. ನಮ್ಮ ಮೇಲಿನ ನಂಬಿಕೆ ಕಳೆದುಕೊಳ್ಳಬೇಡಿ, ನಮ್ಮ ಮೇಲೆ ಭರವಸೆ ಇಡಿ. ಆ ನಿಮ್ಮ ಭರವಸೆಯನ್ನು ಈಡೇರಿಸುವ ವಾಗ್ದಾನ ನಾವು ಕೊಡುತ್ತೇವೆ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. 
ವಿರಾಟ್ ಕೊಹ್ಲಿ ಭಾವನಾತ್ಮಕ ಸಂದೇಶದ ಜೊತೆಗೆ ಟೀಂ ಇಂಡಿಯಾ ಆಟಗಾರರ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. 
ಇನ್ನು ಎರಡನೇ ಟೆಸ್ಟ್ ಪಂದ್ಯದ ವೇಳೆ ಬೆನ್ನು ನೋವಿಗೆ ಒಳಗಾಗಿರುವ ವಿರಾಟ್ ಕೊಹ್ಲಿ ಚೇತರಿಸಿಕೊಂಡು ಮೂರನೇ ಟೆಸ್ಟ್ ಪಂದ್ಯದಲ್ಲಿ ಹೇಗೆ ಆಡಲಿದ್ದಾರೆ ಎಂಬುದರ ಬಗ್ಗೆ ಅಭಿಮಾನಿಗಳು ಕಾತರರಾಗಿದ್ದಾರೆ. ಇದೇ ಆಗಸ್ಟ್ 18ರಿಂದ ನಾಟಿಂಗ್ ಹ್ಯಾಮ್ ನ ಟೆಂಟ್ ಬ್ರಿಡ್ಜ್ ನಲ್ಲಿ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com