ಸ್ಪಾಟ್ ಫಿಕ್ಸಿಂಗ್: ಪಾಕ್ ಆಟಗಾರ ನಾಸೀರ್‌ಗೆ 10 ವರ್ಷ ನಿಷೇಧ ಶಿಕ್ಷೆ

ಸ್ಪಾಟ್ ಫಿಕ್ಸಿಂಗ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪಾಕಿಸ್ತಾನದ ಮಾಜಿ ಆಟಗಾರ ನಾಸೀರ್ ಜಮ್ಶೆಡ್ ಗೆ ಕ್ರಿಕೆಟ್ ನಿಂದ 10 ವರ್ಷಗಳ ಕಾಲ ನಿಷೇಧ ಶಿಕ್ಷೆ ವಿಧಿಸಲಾಗಿದೆ...
ನಾಸೀರ್ ಜೆಮ್ಶೆಡ್
ನಾಸೀರ್ ಜೆಮ್ಶೆಡ್
ಇಸ್ಲಾಮಾಬಾದ್: ಸ್ಪಾಟ್ ಫಿಕ್ಸಿಂಗ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪಾಕಿಸ್ತಾನದ ಮಾಜಿ ಆಟಗಾರ ನಾಸೀರ್ ಜಮ್ಶೆಡ್ ಗೆ ಕ್ರಿಕೆಟ್ ನಿಂದ 10 ವರ್ಷಗಳ ಕಾಲ ನಿಷೇಧ ಶಿಕ್ಷೆ ವಿಧಿಸಲಾಗಿದೆ. 
2017ರಲ್ಲಿ ನಡೆದಿದ್ದ ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್)ನಲ್ಲಿ ನಾಸೀರ್ ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪ ಎದುರಿಸುತ್ತಿದ್ದು ಇದೀಗ ಅವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ವಿರೋಧಿ ನ್ಯಾಯಮಂಡಳಿ 10 ವರ್ಷ ನಿಷೇಧ ಹೇರಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಹೇಳಿದೆ. 
ನಾಸೀರ್ ಪಾಕಿಸ್ತಾನ ಪರ 48 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ 2017ರಲ್ಲಿ ಅವರನ್ನು ಕ್ರಿಕೆಟ್ ನ ಎಲ್ಲಾ ಮಾದರಿಯಿಂದಲೂ ಬ್ಯಾನ್ ಮಾಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com