ಭರ್ಜರಿ ಬ್ಯಾಟಿಂಗ್: ಮತ್ತೆ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಕೊಹ್ಲಿ ಅಗ್ರಸ್ಥಾನಕ್ಕೆ!

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಗೆಲುವಿನ ಸಿಹಿ ಬಳಿಕ ಇದೀಗ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ದುಬೈ: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಗೆಲುವಿನ ಸಿಹಿ ಬಳಿಕ ಇದೀಗ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. 
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 937 ಅಂಕಗಳನ್ನು ಸಂಪಾದಿಸುವ ಮೂಲಕ ಮತ್ತೆ ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. 
ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್ 961 ಅಂಕ ಗಳಿಸಿರುವುದು ಸಾರ್ವಕಾಲಿಕ ದಾಖಲೆಯಾಗಿದೆ. ಈ ಪೈಕಿ ವಿರಾಟ್ ಕೊಗ್ಲಿ 937 ಅಂಕಗಳನ್ನು ಸಂಪಾದಿಸುವ ಮೂಲಕ ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ 11ನೇ ಸ್ಥಾನ ಸಂಪಾದಿಸಿದ್ದಾರೆ. 
ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ ಸ್ಟೀವನ್ ಸ್ಮಿತ್(947), ಲೇನ್ ಹಂಟನ್(945), ಜಾಕ್ ಹಬ್ಸ್(942), ರಿಕ್ಕಿ ಪಾಂಟಿಂಗ್(942), ಪೀಟರ್ ಮೇ(941), ಗ್ಯಾರಿ ಸೊಬರ್ಸ್, ಕ್ಲೈಡ್ ವಾಲ್ಕೂಟ್, ವಿವಿನ್ ರಿಚರ್ಡ್ಸ್ ಮತ್ತು ಕುಮಾರ ಸಂಗಕ್ಕಾರ(ಎಲ್ಲರೂ 938 ಅಂಕ) ಗಳಿಸಿ ಕ್ರಮವಾಗಿ ಸ್ಥಾನ ಪಡೆದಿದ್ದಾರೆ.
ವಿರಾಟ್ ಕೊಹ್ಲಿ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 97 ರನ್ ಹಾಗೂ ದ್ವಿತೀಯ ಇನ್ನಿಂಗ್ಸ್ ನಲ್ಲಿ 103 ರನ್ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com