ಲಂಡನ್: ಇಂಗ್ಲೆಂಡಿಗರಿಗೆ ದುಸ್ವಪ್ನವಾಗಿ ಕಾಡುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಕಟ್ಟಿ ಹಾಕಲು ಆಂಗ್ಲ ಪಡೆ ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದೆ.
ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಎರಡು ಪಂದ್ಯ ಸೋತು ಒಂದು ಪಂದ್ಯ ಗೆದ್ದು ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ. ಇನ್ನು ಮೊದಲೆರಡು ಪಂದ್ಯಗಳ ಸೋಲಿನ ನಡುವೆ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ಆಂಗ್ಲರನ್ನು ಹೆಚ್ಚು ಕಾಡಿದ್ದರು. ಇನ್ನು ಮೂರನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ತಂಡಕ್ಕೆ ಭರ್ಜರಿ ಗೆಲುವು ತಂದು ಕೊಡುವ ಮೂಲಕ ಆಂಗ್ಲರಿಗೆ ದುಸ್ವಪ್ನವಾಗಿ ಕಾಡಿದ್ದಾರೆ.
ರನ್ ಮಷೀನ್ ವಿರಾಟ್ ಕೊಹ್ಲಿ ಪ್ರಸ್ತುತ ಇಂಗ್ಲೆಂಡ್ ಟೆಸ್ಟ್ ಸರಣಿ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 2 ಶತಕ, 1 ಅರ್ಧಶತಕ ಸೇರಿದಂತೆ 440 ರನ್ ಪೇರಿಸಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ರನ್ ಹೊಳೆ ಹರಿಸುತ್ತಿರುವುದು ಇಂಗ್ಲೆಂಡ್ ಆಟಗಾರರು ಕಂಗೆಡಲು ಕಾರಣವಾಗಿತು.
ಇನ್ನು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಕಟ್ಟಿಹಾಕಲು ಇಂಗ್ಲೆಂಡ್ ನಾನಾ ರಣತಂತ್ರಗಳನ್ನು ಮಾಡುತ್ತಿದೆ. ಇನ್ನು ವಿರಾಟ್ ಕೊಹ್ಲಿಯನ್ನು ಕಟ್ಟಿ ಹಾಕಲೇ ಬೇಕು ಎಂದು ತಂಡದ ಕೋಚ್ ನಿಂದ ಕಟ್ಟಪ್ಪಣೆಯಾಗಿದೆ.
ಇಂಗ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.