ಕೆಪಿಎಲ್ 2018: ಬೌಂಡರಿ ಗೆರೆಯಲ್ಲಿ ಕನ್ನಡಿಗ ಸ್ಟುವರ್ಟ್ ಬಿನ್ನಿಯಿಂದ ಅದ್ಭುತ ಕ್ಯಾಚ್!

ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) ನಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡದ ಆಟಗಾರ ಕನ್ನಡಿಗ ಸ್ಟುವರ್ಟ್ ಬಿನ್ನಿ ಬೌಂಡರಿ ಗೆರೆಯಲ್ಲಿ ಅದ್ಭುತ ಕ್ಯಾಚ್ ಹಿಡಿದಿರುವ ವಿಡಿಯೋ ಸದ್ಯ ವೈರಲ್ ಆಗಿದೆ...
ಸ್ಟುವರ್ಟ್ ಬಿನ್ನಿ
ಸ್ಟುವರ್ಟ್ ಬಿನ್ನಿ
ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) ನಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡದ ಆಟಗಾರ ಕನ್ನಡಿಗ ಸ್ಟುವರ್ಟ್ ಬಿನ್ನಿ ಬೌಂಡರಿ ಗೆರೆಯಲ್ಲಿ ಅದ್ಭುತ ಕ್ಯಾಚ್ ಹಿಡಿದಿರುವ ವಿಡಿಯೋ ಸದ್ಯ ವೈರಲ್ ಆಗಿದೆ. 
ಸದ್ಯ ಕೆಪಿಎಲ್ ನಲ್ಲಿ ಸ್ಟುವರ್ಟ್ ಬಿನ್ನಿ ಆಲ್ ರೌಂಡ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಎರಡು ಪಂದ್ಯಗಳಲ್ಲಿ ಐದು ವಿಕೆಟ್ ಹಾಗೂ 37 ರನ್ ಬಾರಿಸಿದ್ದಾರೆ. 
ಬಳ್ಳಾರಿ ಟಸ್ಕರ್ಸ್ ವಿರುದ್ಧದ ಪಂದ್ಯದಲ್ಲಿ ಸ್ಟುವರ್ಟ್ ಬಿನ್ನಿ ಅವರು ಟಿ ಪ್ರದೀಪ್ ಬಾರಿಸಿದ ಚೆಂಡನ್ನು ಬೌಂಡರಿ ಗೆರೆಯಲ್ಲಿ ಹಾರಿ ಒಂದೇ ಕೈಯಲ್ಲಿ ಚೆಂಡನ್ನು ಹಿಡಿಯುವ ಮೂಲಕ ಅದ್ಭುತ ಕ್ಯಾಚ್ ಹಿಡಿದಿದ್ದಾರೆ. 
ಈ ಪಂದ್ಯದಲ್ಲಿ ಬಳ್ಳಾರಿ ಟಸ್ಕರ್ಸ್ ವಿರುದ್ಧ ಬೆಳಗಾವಿ ಪ್ಯಾಂಥರ್ಸ್ 22 ರನ್ ಗಳಿಂದ ಗೆಲುವು ಸಾಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com