ಇಂಗ್ಲೆಂಡ್: 250 ಟೆಸ್ಟ್ ವಿಕೆಟ್ ಪಡೆದ ಮೂರನೇ ಭಾರತೀಯ ಆಟಗಾರ ಇಶಾಂತ್ ಶರ್ಮಾ!
ಭಾರತ ಕ್ರಿಕೆಟ್ ತಂಡದ ವೇಗಿ ಇಶಾಂತ್ ಶರ್ಮಾ ಹೊಸ ದಾಖಲೆ ನಿರ್ಮಿಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ 250 ವಿಕೆಟ್ ಗಳನ್ನು ಪಡೆದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾರತ ಕ್ರಿಕೆಟ್ ತಂಡದ ವೇಗಿ ಇಶಾಂತ್ ಶರ್ಮಾ ಹೊಸ ಮೈಲಿಗಲ್ಲು ತಲುಪಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ 250 ವಿಕೆಟ್ ಗಳನ್ನು ಪಡೆದ ಮೂರನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 4 ನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಶರ್ಮಾ ಇಂಗ್ಲೆಂಡ್ ನಾಯಕ ಜೋ ರೂಟ್ ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 250 ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಆಗಿದ್ದಾರೆ. ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ ಮೊದಲಿಗರಾಗಿದ್ದರೆ, ಹರ್ಭಜನ್ ಸಿಂಗ್ ಎರಡನೆಯವರು.
ಕಪಿಲ್ ದೇವ್ ಹಾಗೂ ಜಹೀರ್ ಖಾನ್ ಟೆಸ್ಟ್ ಕ್ರಿಕೆಟ್ ನಲ್ಲಿ 250 ವಿಕೆಟ್ ಕಬಳಿಸಿದ ದಾಖಲೆ ಹೊಂದಿದ್ದರು. ಈಗ ಇಶಾಂತ್ ಶರ್ಮಾ ಸಹ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಇಷ್ಟೇ ಅಲ್ಲದೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 50 ವಿಕೆಟ್ ಕಬಳಿಸಿದ ಭಾರತದ 7ನೇ ಬೌಲರ್ ಎಂಬ ಖ್ಯಾತಿಯೂ ಇಶಾಂತ್ ಶರ್ಮಾಗೆ ಸಿಕ್ಕಿದೆ.