ಅಡಿಲೇಡ್(ಆಸ್ಟ್ರೇಲಿಯಾ): ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 235 ರನ್ ಗಳಿಗೆ ಆಲೌಟ್ ಆಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 250 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಆಸ್ಟ್ರೇಲಿಯಾ 235 ರನ್ ಗಳಿಗೆ ಆಲೌಟ್ ಆಗಿ 15 ರನ್ ಗಳ ಹಿನ್ನಡೆ ಅನುಭವಿಸಿತ್ತು.
15 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಪರ ಆಟಗಾರರು ಸಮಯೋಚಿತ ಆಟ ಪ್ರದರ್ಶಿಸಿದರು. ಪರಿಣಾಮ ಮೂರನೇ ದಿನದಾಟದಂತ್ಯಕ್ಕೆ ಭಾರತ 3 ವಿಕೆಟ್ ನಷ್ಟಕ್ಕೆ 151 ರನ್ ಪೇರಿಸಿದ್ದು 166 ರನ್ ಗಳ ಮುನ್ನಡೆ ಸಾಧಿಸಿದೆ. ಇನ್ನು ಕಣದಲ್ಲಿರುವ ಚೇತೇಶ್ವರ ಪೂಜಾರ ಅಜೇಯ 40 ರನ್ ಹಾಗೂ ಅಜಿಂಕ್ಯ ರಹಾನೆ ಅಜೇಯ 1 ರನ್ ಗಳಿಸಿದ್ದು ನಾಲ್ಕನೇ ದಿನದಾಟವನ್ನು ಆರಂಭಿಸಲಿದ್ದಾರೆ.
ಭಾರತದ ಪರ ಮೊದಲ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ 123, ರೋಹಿತ್ ಶರ್ಮಾ 37, ರಿಷಬ್ ಪಂತ್ 25, ಆರ್ ಅಶ್ವಿನ್ 25 ರನ್ ಪೇರಿಸಿದ್ದಾರೆ.
ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಹೇಜಲ್ವುಡ್ 3, ಸ್ಟಾರ್ಕ್, ಕಮ್ಮಿಸ್ ಹಾಗೂ ಲ್ಯಾನ್ ತಲಾ 2 ವಿಕೆಟ್ ಪಡೆದಿದ್ದಾರೆ.
ಆಸ್ಟ್ರೇಲಿಯಾ ಪರ ಹ್ಯಾರಿಸ್ 26, ಖವಾಜ 28, ಹ್ಯಾಂಡ್ಸ್ ಕ್ಯೂಬ್ 34, ಹೇಡ್ ಅಜೇಯ 72 ರನ್ ಪೇರಿಸಿದ್ದಾರೆ.
ಭಾರತದ ಪರ ಬೌಲಿಂಗ್ ನಲ್ಲಿ ಅಶ್ವಿನ್ ಹಾಗೂ ಬುಮ್ರಾ ತಲಾ 3 ವಿಕೆಟ್, ಇಶಾಂತ್ ಶರ್ಮಾ ಹಾಗೂ ತಲಾ 2 ವಿಕೆಟ್ ಪಡೆದಿದ್ದಾರೆ.