ಅಡಿಲೇಡ್ ಟೆಸ್ಟ್ ಗೆಲುವಿನ ಸಂಭ್ರಮಾಚರಣೆಯಲ್ಲಿ ವಿರುಷ್ಕಾ-ಪೃಥ್ವಿ!

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು ಈ ನಡುವೆ ಟೆಸ್ಟ್ ಪಂದ್ಯದ ಗೆಲುವನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪತ್ನಿ...
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ, ಪೃಥ್ವಿ ಶಾ
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ, ಪೃಥ್ವಿ ಶಾ
ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು ಈ ನಡುವೆ ಟೆಸ್ಟ್ ಪಂದ್ಯದ ಗೆಲುವನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಹಾಗೂ ಯುವ ಕ್ರಿಕೆಟಿಗ ಪೃಥ್ವಿ ಶಾ ಸಂಭ್ರಮಿಸಿದ್ದಾರೆ. 
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ಪೃಥ್ವಿ ಶಾ ಸೆಲ್ಫಿ ಫೋಟೋ ತೆಗೆದುಕೊಂಡು ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. 
ವಿರುಷ್ಕಾ ಜೋಡಿ ಡಿಸೆಂಬರ್ 11ಕ್ಕೆ ಮದುವೆಯಾಗಿದ್ದು ಇದು ಅವರ ಮೊದಲ ವಿವಾಹ ವಾರ್ಷಿಕೋತ್ಸವ ಹಾಗೂ ಮತ್ತೊಂದೆಡೆ ಆಸ್ಟ್ರೇಲಿಯಾ ವಿರುದ್ಧದ ಅಡಿಲೇಡ್ ಟೆಸ್ಟ್ ಜಯ ಗೆಲುವು ಈ ಹಿನ್ನೆಲೆಯಲ್ಲಿ ವಿರುಷ್ಕಾ ಜೋಡಿ ಸಂಭ್ರಮದಲ್ಲಿ ಯುವ ಕ್ರಿಕೆಟಿಗ ಪೃಥ್ವಿ ಶಾ ಭಾಗಿಯಾಗಿದ್ದರು. 
ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಪೃಥ್ವಿ ಶಾ ಆಯ್ಕೆಯಾಗಿದ್ದರು. ಆದರೆ ಗಾಯಗೊಂಡಿದ್ದರಿಂದ ಪೃಥ್ವಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. 
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ ಗಳಿಂದ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿತ್ತು. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com