ಅಡಿಲೇಡ್ ಟೆಸ್ಟ್ ಪಂದ್ಯ ಮುಕ್ತಾಯವಾಗಿ ಪರ್ತ್ ನಲ್ಲಿ ನಡೆಯಲಿರುವ 2ನೇ ಟೆಸ್ಟ್ ನತ್ತ ಎಲ್ಲರ ಚಿತ್ತ ನೆಟ್ಟಿದ್ದರೂ ಆಸಿಸ್ ಮಾಜಿ ಕ್ರಿಕೆಟಿಗರು ಮಾತ್ರ ಇನ್ನೂ ಅಡಿಲೇಡ್ ಟೆಸ್ಟ್ ವಿಚಾರದ ಬಗ್ಗೆ ಇನ್ನೂ ಮಾತನಾಡುತ್ತಿದ್ದಾರೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಎಂಬಂತೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಹೊಸ ಸೇರ್ಪಡೆಯಾಗಿದ್ದಾರೆ. ಅಡಿಲೇಡ್ ಟೆಸ್ಟ್ ನಲ್ಲಿ ಅಂಪೈರ್ ಗಳು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ ಎಂದು ಪಾಂಟಿಂಗ್ ಕಿಡಿಕಾರಿದ್ದಾರೆ.