ಪರ್ತ್: ಗಾಯದ ಸಮಸ್ಯೆಯಿಂದಾಗಿ ಪರ್ತ್ ಟೆಸ್ಟ್‌ನಿಂದ ಆರ್ ಅಶ್ವಿನ್ ಹಾಗೂ ರೋಹಿತ್ ಶರ್ಮಾ ತಂಡದಿಂದ ಹೊರಗುಳಿಲಿದ್ದು ತಂಡಕ್ಕೆ ಸ್ವಲ್ಪ ಹಿನ್ನಡೆಯಲಾಗಲಿದೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ಎರಡನೇ ಪಂದ್ಯ ಪರ್ತ್ ನಲ್ಲಿ ನಾಳೆಯಿಂದ ಆರಂಭವಾಗಲಿದ್ದು ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆಲ್ಲುವುದು ನಮ್ಮ ಗುರಿ ಎಂದು ಕೊಹ್ಲಿ ಹೇಳಿದ್ದಾರೆ.
ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಟೆಸ್ಟ್ ಸರಣಿ ಗೆಲ್ಲುವ ತವಕದಲ್ಲಿರುವ ಟೀಂ ಇಂಡಿಯಾಗೆ ಅಶ್ವಿನ್ ಹಾಗೂ ರೋಹಿತ್ ಶರ್ಮಾ ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರುವುದು ತಣ್ಣೀರೆರೆಚಿದಂತಾಗಿದೆ.
ಇನ್ನು ಯುವ ಕ್ರಿಕೆಟಿಗ ಪೃಥ್ವಿ ಶಾ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡಿದ್ದು ಸದ್ಯ ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಿನಲ್ಲಿ ಗಾಯದ ಸಮಸ್ಯೆ ಆಸ್ಟ್ರೇಲಿಯಾ ಟೆಸ್ಟ್ ಸರಣಿ ಮೇಲೆ ಕಾರ್ಮೋಡ ಕವಿದಂತಾಗಿದೆ.