ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಹೊರಗುಳಿದ ಪೃಥ್ವಿ ಶಾ, ಮಯಾಂಕ್ ಅಗರ್ವಾಲ್ ಗೆ ಸ್ಥಾನ!

ಎರಡನೇ ಟೆಸ್ಟ್ ಪಂದ್ಯ ಗೆಲ್ಲುವುದಕ್ಕೆ ಹರಸಾಹಸ ಪಡುತ್ತಿರುವ ಟೀಂ ಇಂಡಿಯಾಗೆ ಮತ್ತೊಂದು ಆತಂಕ ಎದುರಾಗಿದ್ದು, ವಿಶ್ವಾಸಾರ್ಹ ಬ್ಯಾಟ್ಸ್ಮನ್ ಪೃಥ್ವಿ ಶಾ ಗಾಯದ ಸಮಸ್ಯೆಯಿಂದಾಗಿ ಆಸ್ಟ್ರೇಲಿಯಾ ಟೆಸ್ಟ್
ಪೃಥ್ವಿ ಶಾ
ಪೃಥ್ವಿ ಶಾ
Updated on
ಎರಡನೇ ಟೆಸ್ಟ್ ಪಂದ್ಯ ಗೆಲ್ಲುವುದಕ್ಕೆ ಹರಸಾಹಸ ಪಡುತ್ತಿರುವ  ಟೀಂ ಇಂಡಿಯಾಗೆ ಮತ್ತೊಂದು ಆತಂಕ ಎದುರಾಗಿದ್ದು, ವಿಶ್ವಾಸಾರ್ಹ ಬ್ಯಾಟ್ಸ್ಮನ್ ಪೃಥ್ವಿ ಶಾ ಗಾಯದ ಸಮಸ್ಯೆಯಿಂದಾಗಿ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದಲೆ ಹೊರಗುಳಿದಿದ್ದಾರೆ. 
ಮುಂದಿನ ಎರಡು ಪಂದ್ಯಗಳಲ್ಲಿ ಮುರಳಿ ವಿಜಯ್ ಅಥವಾ ಕೆ.ಎಲ್ ರಾಹುಲ್ ಬದಲಿಗೆ ಪೃಥ್ವಿ ಶಾ ಆಡುವ ನಿರೀಕ್ಷೆ ಇತ್ತು. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ XI ಪಂದ್ಯದಲ್ಲಿ ಗಾಯಗೊಂಡಿದ್ದ ಪೃಥ್ವಿ ಶಾ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಪ್ರಾರಂಭದಲ್ಲಿ ಎರಡು ಟೆಸ್ಟ್ ಪಂದ್ಯಗಳಿಗೆ ಮಾತ್ರ ಶಾ ಅಲಭ್ಯರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈಗ ಸಂಪೂರ್ಣ ಸರಣಿಯಿಂದ ಪೃಥ್ವಿ ಶಾ ಅಲಭ್ಯರಾಗಲಿದ್ದು, ಶಾ ಬದಲಿಗೆ ಮಯಾಂಕ್ ಅಗರ್ವಾಲ್ ಆಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com