ಕ್ರಿಕೆಟ್

ಪರ್ತ್ ಟೆಸ್ಟ್: ಕಾಂಗರೂಗಳು ಪತರುಗುಟ್ಟುವಂತೆ ಮಾಡಿದ್ದ ಶಮಿಯಿಂದ ವಿಶಿಷ್ಠ ದಾಖಲೆ

ಪರ್ತ್ ಟೆಸ್ಟ್: ಕಾಂಗರೂಗಳು ಪತರುಗುಟ್ಟುವಂತೆ ಮಾಡಿದ್ದ ಶಮಿಯಿಂದ ವಿಶಿಷ್ಠ ದಾಖಲೆ
ಸಂಗ್ರಹ ಚಿತ್ರ
Published On :
ಪರ್ತ್: ಆಸ್ಟ್ರೇಲಿಯಾ ವಿರುದ್ಧ 2ನೇ ಟೆಸ್ಟ್ ನ 2ನೇ ಇನ್ನಿಂಗ್ಸ್ ನಲ್ಲಿ ಆಸಿಸ್ ದಾಂಡಿಗರನ್ನು ಬಿಟ್ಟೂ ಬಿಡದೇ ಕಾಡಿದ್ದ ಭಾರತೀಯ ವೇಗಿ ಮಹಮದ್ ಶಮಿ ಇದೀಗ ಅಪೂರ್ವ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.
2ನೇ ಇನ್ನಿಂಗ್ಸ್ ನಲ್ಲಿ 56 ರನ್ ಗಳಿಗೆ 6 ವಿಕೆಟ್ ಕಬಳಿಸಿ ಕಾಂಗರೂಗಳು ಪತರುಗುಟ್ಟುವಂತೆ ಮಾಡಿದ್ದ ಶಮಿ, ತಮ್ಮ ವೃತ್ತಿ ಜೀವನದ ಶ್ರೇಷ್ಠ ನಿರ್ವಹಣೆ ತೋರಿದ್ದಾರೆ. ಅಲ್ಲದೆ ಆಸಿಸ್ ನೆಲದಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ನಾಲ್ಕನೇ ಆಟಗಾರ ಎಂಬ ಕೀರ್ತಿಗೂ ಶಮಿ ಪಾತ್ರರಾಗಿದ್ದಾರೆ. ಈ ಹಿಂದೆ 1985ರಲ್ಲಿ ಕಪಿಲ್ ದೇವ್ 106 ರನ್ ತೆತ್ತು ಎಂಟು ವಿಕೆಟುಗಳನ್ನು ಪಡೆದಿರುವುದು ಭಾರತೀಯ ಬೌಲರ್‌ನ ಅತ್ಯುತ್ತಮ ಪ್ರದರ್ಶನವಾಗಿದೆ.  2003ರಲ್ಲಿ ಅಜಿತ್ ಅಗರ್‌ಕರ್ (41/6) ಹಾಗೂ 1967ರಲ್ಲಿ ಅದಿಲ್ ಅಲಿ ನಂತರದ ಸ್ಥಾನಗಳಲ್ಲಿ ಗುರುತಿಸಿಕೊಂಡಿದ್ದಾರೆ. 
ಭಾರತ ಕ್ರಿಕೆಟ್ ತಂಡದ ಬಲಗೈ ಅನುಭವಿ ವೇಗಿ ಮೊಹಮ್ಮದ್ ಶಮಿ, ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆರು ವಿಕೆಟುಗಳನ್ನು ಕಬಳಿಸುವ ಮೂಲಕ ಜೀವನಶ್ರೇಷ್ಠ ಬೌಲಿಂಗ್ ನಿರ್ವಹಣೆ ನೀಡಿದ್ದಾರೆ. ಒಟ್ಟಾರೆಯಾಗಿ ಟೆಸ್ಟ್ ಕ್ರಿಕೆಟ್ ನಲ್ಲಿ ನಾಲ್ಕನೇ ಬಾರಿಗೆ ಶಮಿ ಐದು ವಿಕೆಟ್ ಗಳ ಸಾಧನೆ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.