ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಸ್ಫೋಟಕ ಬ್ಯಾಟ್ಸ್ ಮನ್ ಕನ್ನಡಿಗ ಮನೀಶ್ ಪಾಂಡೆಗೆ ಕೊಕ್ ಕೊಟ್ಟಿರುವುದಕ್ಕೆ ಬಿಸಿಸಿಐ ಆಯ್ಕೆ ಸಮಿತಿಯ ವಿರುದ್ಧ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ...
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಸ್ಫೋಟಕ ಬ್ಯಾಟ್ಸ್ ಮನ್ ಕನ್ನಡಿಗ ಮನೀಶ್ ಪಾಂಡೆಗೆ ಕೊಕ್ ಕೊಟ್ಟಿರುವುದಕ್ಕೆ ಬಿಸಿಸಿಐ ಆಯ್ಕೆ ಸಮಿತಿಯ ವಿರುದ್ಧ ಟ್ವೀಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದ ಬಳಿಕ ಟೀಂ ಇಂಡಿಯಾ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು ಕಿವೀಸ್ ವಿರುದ್ಧ ಭಾರತ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸಂಬಂಧ ಬಿಸಿಸಿಐ ಇಂದು ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ಮನೀಶ್ ಪಾಂಡೆಗೆ ತಂಡದಲ್ಲಿ ಸ್ಥಾನ ಕಲ್ಪಿಸಿಲ್ಲ.
ಮನೀಶ್ ಪಾಂಡೆ ದೇಸಿ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು ಅವರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ನೀಡಬೇಕಿತ್ತು ಎಂದು ಟ್ವೀಟರಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲ ಸುರೇಶ್ ರೈನಾ ಹಾಗೂ ಶ್ರೇಯಸ್ ಅಯ್ಯರ್ ಗೂ ಸ್ಥಾನ ಕಲ್ಪಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
KL Rahul is in India's Test team, ODI team and T20 team. He had better start delivering at least in one of the formats soon. Only very few are lucky to be given so many chances. #AUSvsIND