ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸುವ ನಿರೀಕ್ಷೆ ಇತ್ತು. ಅದರಂತೆ ಇಂದು ಚೇತೇಶ್ವರ ಪೂಜಾರ ಶತಕ ಸಿಡಿಸಿದರೆ, ನಾಯಕ ವಿರಾಟ್ ಕೊಹ್ಲಿ 82 ರನ್ ಗಳಿಸಿ ಔಟ್ ಆಗಿದ್ದರು. ಆ ಬಳಿಕ ಬಂದ ರಹಾನೆ 34 ರನ್ ಗಳಿಸಿ ನಿರ್ಗಮಿಸಿದರೆ, ರೋಹಿತ್ ಶರ್ಮಾ ಅಜೇಯ 63 ರನ್ ಕಲೆಹಾಕಿದರು. ರಹಾನೆ ಔಟಾದ ಬಳಿಕ ಕ್ರೀಸ್ ಗೆ ಬಂದ ರಿಷಬ್ ಪಂತ್ 39 ರನ್ ಗಳಿಸಿ ಸ್ಟಾರ್ಕ್ ಬೌಲಿಂಗ್ ನಲ್ಲಿ ನಿರ್ಗಮಿಸಿದರು. ಅಂತಿಮವಾಗಿ 4 ರನ್ ಗಳಿಸಿದ್ದ ರವೀಂದ್ರ ಜಡೇಜಾ ಹೇಜಲ್ ವುಡ್ ಬೌಲಿಂಗ್ ನಲ್ಲಿ ಔಟ್ ಆಗುತ್ತಿದ್ದಂತೆಯೇ ಕೊಹ್ಲಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿದರು.