ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಪಾಕ್ ಮಾಡಿದ್ದ ತಪ್ಪನ್ನೇ ವಿರಾಟ್ ಕೊಹ್ಲಿಯೂ ಮಾಡಿದ್ರಾ?

ಆಸ್ಟ್ರೇಲಿಯಾ ವಿರುದ್ಧ ಪಾಕ್ ಮಾಡಿದ್ದ ತಪ್ಪನ್ನೇ ವಿರಾಟ್ ಕೊಹ್ಲಿಯೂ ಮಾಡಿದ್ರಾ?
ಸಂಗ್ರಹ ಚಿತ್ರ
Published On :
ಸುಲಭವಾಗಿ ಗೆಲ್ಲಬಹುದಿದ್ದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಫಾಲೋ ಆನ್ ನೀಡದೆ ಪಂದ್ಯ ಡ್ರಾ ಆಗಿತ್ತು. ಇದೀಗ ಇದೇ ರೀತಿಯ ತಪ್ಪನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಸಹ ಮಾಡಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ.
ಹೌದು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್, ಬಾಕ್ಸಿಂಗ್ ಡೇ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 443 ರನ್ ಗಳಿಸಿದ್ದಾಗ ನಾಯಕ ವಿರಾಟ್ ಕೊಹ್ಲಿ ಇನ್ನಿಂಗ್ಸ್  ಡಿಕ್ಲೇರ್ ಮಾಡಿಕೊಂಡಿದ್ದರು. ನಂತರ ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 151 ರನ್ ಗಳಿಗೆ ಆಲೌಟ್ ಆಗಿದ್ದರು. 
ಇದರೊಂದಿಗೆ ಆಸ್ಟ್ರೇಲಿಯಾ 292 ರನ್ ಗಳ ಹಿನ್ನಡೆ ಅನುಭವಿಸಿತ್ತು. ಇದು ಟೀಂ ಇಂಡಿಯಾಗೆ ವರದಾನವಾಗಿತ್ತು. ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾಗೆ ಫಾಲೋ ಆನ್ ನೀಡಬೇಕಿತ್ತು. ಆದರೆ ಅದರ ಬದಲಿಗೆ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು ಮೂರನೇ ದಿನದಾಟ ಮುಕ್ತಾಯಕ್ಕೆ ಭಾರತ 5 ವಿಕೆಟ್ ಕಳೆದುಕೊಂಡು 54 ರನ್ ಪೇರಿಸಿದೆ. 
ಇನ್ನು ಟೀಂ ಇಂಡಿಯಾ 346 ರನ್ ಗಳ ಮುನ್ನಡೆ ಸಾಧಿಸಿದೆ. ನಾಳೆ ಟೀಂ ಇಂಡಿಯಾದ ಬೌಲರ್ ಗಳು ಬ್ಯಾಟಿಂಗ್ ಆರಂಭಿಸಲಿರುವುದರಿಂದ ಅವರು ರನ್ ಗತಿ ಏರಿಸುತ್ತಾರೆ ಎಂಬುದು ಸಂಶಯ. ಇನ್ನು ಟೀಂ ಇಂಡಿಯಾವನ್ನು ಅಲ್ಪಮೊತ್ತಕ್ಕೆ ಆಸ್ಟ್ರೇಲಿಯಾ ಕಟ್ಟಿ ಹಾಕಿ, ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ಉತ್ತಮವಾಗಿ ಬ್ಯಾಟಿಂಗ್ ಮಾಡಿದರೆ. ಆಸೀಸ್ ಗೆ ಗೆಲುವಿನ ಸಿಹಿ ಹೆಚ್ಚಿದೆ. 
ಒಟ್ಟಾರೆ ವಿರಾಟ್ ಕೊಹ್ಲಿ ಈ ನಿರ್ಧಾರ ತಂಡಕ್ಕೆ ವರವಾಗುತ್ತಾ? ಅಥವಾ ಶಾಪವಾಗುತ್ತಾ? ಎಂಬುದು ನಾಳೆ ತಿಳಿಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.