ವಿಶ್ವಕಪ್ ಅಂಡರ್-19 ಫೈನಲ್: ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿ

ಐಸಿಸಿ ವಿಶ್ವಕಪ್ ಅಂಡರ್ 19 ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯ ವರುಣನ ಅವಕೃಪೆಗೆ ಪಾತ್ರವಾಗಿದೆ.
ಭಾರತ ವರ್ಸಸ್ ಆಸ್ಟ್ರೇಲಿಯಾ
ಭಾರತ ವರ್ಸಸ್ ಆಸ್ಟ್ರೇಲಿಯಾ
Updated on: 
ಬೇಓವಲ್: ಐಸಿಸಿ ವಿಶ್ವಕಪ್ ಅಂಡರ್ 19 ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯ ವರುಣನ ಅವಕೃಪೆಗೆ ಪಾತ್ರವಾಗಿದೆ. 
ನ್ಯೂಜಿಲೆಂಡ್ ನ ಬೇಓವಲ್ ನಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ವೇಗಿಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡ 216 ರನ್ ಗಳಿಗೆ ಆಲೌಟ್ ಆಯಿತು. 
ಆಸ್ಟ್ರೇಲಿಯಾ ನೀಡಿದ ಸಾಧಾರಣ ಮೊತ್ತದ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ವಿಕೆಟ್ ನಷ್ಟವಿಲ್ಲದೆ 4 ಓವರ್ ನಲ್ಲಿ 23 ರನ್ ಗಳಿಸಿದ್ದಾಗ ಮಳೆ ಬಂದಿದ್ದರಿಂದ ಮೈದಾನದ ಅಂಪೈರ್ ಗಳು ತಾತ್ಕಲಿಕವಾಗಿ ಪಂದ್ಯವನ್ನು ನಿಲ್ಲಿಸಿದರು. 
ಭರ್ಜರಿ ಫಾರ್ಮ್ ನಲ್ಲಿ ಭಾರತ ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದು ಫೈನಲ್ ಪಂದ್ಯವನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದಾಗ ಮಳೆ ಆತಂಕ ಮೂಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com