ಪೋರ್ಟ್ ಎಲಿಜಬೆತ್ ಪಿಚ್‌ನಲ್ಲಿ ಎಂದೂ ಗೆಲ್ಲದ ಟೀಂ ಇಂಡಿಯಾಗೆ ಈ ಬಾರಿ ವಿಜಯಮಾಲೆ ದಕ್ಕುತ್ತಾ?

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಏಕದಿನ ಸರಣಿಯ ಐದನೇ ಪಂದ್ಯ ಪೋರ್ಟ್ ಎಲಿಜಬೆತ್ ನಲ್ಲಿ ಆಡಲಿದ್ದು ನಾಯಕ ವಿರಾಟ್ ಕೊಹ್ಲಿ...
ಟೀಂ ಇಂಡಿಯಾ
ಟೀಂ ಇಂಡಿಯಾ
ಫೋರ್ಟ್ ಎಲಿಜಬೆತ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಏಕದಿನ ಸರಣಿಯ ಐದನೇ ಪಂದ್ಯ ಪೋರ್ಟ್ ಎಲಿಜಬೆತ್ ನಲ್ಲಿ ಆಡಲಿದ್ದು ನಾಯಕ ವಿರಾಟ್ ಕೊಹ್ಲಿ ಪಡೆಗೆ ನಾಳಿನ ಪಂದ್ಯ ನಿಜಕ್ಕೂ ಅಗ್ನಿ ಪರೀಕ್ಷೆಯಾಗಿದೆ. 
ಪೋರ್ಟ್ ಎಲಿಜಬೆತ್ ಮೈದಾನದಲ್ಲಿ ಇಲ್ಲಿಯವರೆಗೂ ಟೀಂ ಇಂಡಿಯಾ ಗೆಲುವಿನ ನಗೆ ಬೀರಿಲ್ಲ. ಈ ಹಿಂದೆ ಟೀಂ ಇಂಡಿಯಾ ಪೋರ್ಟ್ ಎಲಿಜಬೆತ್ ಕ್ರೀಡಾಂಗಣದಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಆಡಿದ್ದ ಅವುಗಳಲ್ಲಿ ಯಾವ ಪಂದ್ಯವನ್ನು ಗೆದ್ದಿರಲಿಲ್ಲ. 
ನಾಳಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಸರಣಿ ಜಯದೊಂದಿಗೆ ಹೊಸ ದಾಖಲೆಯನ್ನು ವಿರಾಟ್ ಕೊಹ್ಲಿ ಪಡೆ ನಿರ್ಮಿಸಿದಂತಾಗುತ್ತದೆ. ಈ ಮೈದಾನದಲ್ಲಿ ಮೊಹಮ್ಮದ್ ಅಜರುದ್ದೀನ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ಎಂಎಸ್ ಧೋನಿ ಭಾರತ ತಂಡವನ್ನು ಮುನ್ನಡೆಸಿದ್ದರು. 
ದುರುದೃಷ್ಟಕರ ಸಂಗತಿಯೆಂದರೆ ಈ ನಾಲ್ಕು ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಸೋಲು ಕಂಡಿದೆ. ಇನ್ನು ತಂಡ ಒಮ್ಮೆಯೂ 200 ರನ್ ಗಳ ಗಡಿ ದಾಟಿಲ್ಲ. ಅಜರುದ್ದೀನ್ ನೇತೃತ್ವದಲ್ಲಿ ಟೀಂ ಇಂಡಿಯಾ 147 ರನ್ ಬಾರಿಸಿದ್ದೆ ಗರಿಷ್ಠ ರನ್ ಆಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com