4-1ರಲ್ಲಿ ಐತಿಹಾಸಿಕ ಏಕದಿನ ಸರಣಿ ಜಯ: ದಕ್ಷಿಣ ಆಫ್ರಿಕಾದಿಂದ ಅಗ್ರ ಸ್ಥಾನ ಕಸಿದ ಭಾರತ!

ಮಂಗಳವಾರ ನಡೆದ 5ನೇ ಏಕದಿನ ಪಂದ್ಯದಲ್ಲಿ ಜಯಗಳಿಸಿದ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಏಕದಿನ ಕ್ರಿಕೆಟ್ ನಲ್ಲಿ ಅಗ್ರ ಸ್ಥಾನಕ್ಕೂ ಏರಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಪೋರ್ಟ್ ಎಲಿಜೆಬೆತ್: ಮಂಗಳವಾರ ನಡೆದ 5ನೇ ಏಕದಿನ ಪಂದ್ಯದಲ್ಲಿ ಜಯಗಳಿಸಿದ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಏಕದಿನ ಕ್ರಿಕೆಟ್ ನಲ್ಲಿ ಅಗ್ರ ಸ್ಥಾನಕ್ಕೂ ಏರಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಏಕದಿನ ಪಂದ್ಯ ಮುಕ್ತಾಯವಾಗುತ್ತಿದ್ದಂತೆಯೇ ಐಸಿಸಿ ತನ್ನ ಏಕದಿನ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಿಸಿದ್ದು, ಪಟ್ಟಿಯಲ್ಲಿ ಈ ಹಿಂದೆ 2ನೇ ಸ್ಥಾನದಲ್ಲಿದ್ದ ಭಾರತ ತಂಡ ಇದೀಗ ಅಗ್ರ  ಸ್ಥಾನಕ್ಕೇರಿದೆ. ಅಗ್ರ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ತಂಡ ಏಕದಿನ ಸರಣಿ ಸೋಲಿನ ಹಿನ್ನಲೆಯಲ್ಲಿ 2ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ನಿನ್ನೆ ನಡೆದ 5ನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ 73 ರನ್ ಗಳ  ಹೀನಾಯ ಸೋಲು ಅನುಭವಿಸಿತ್ತು.
ಇನ್ನು ಈ ಪಂದ್ಯದ ಬಳಿಕ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿ ಪರಿಷ್ಕರಣೆಯಾಗಿದ್ದು, ಈ ಹಿಂದೆ 119 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದ ಭಾರತ ತಂಡ ಸರಣಿ ಜಯದೊಂದಿಗೆ 3 ಹೆಚ್ಚುವರಿ ರೇಟಿಂಗ್ಸ್ ಪಡೆಯುವ ಮೂಲಕ ತನ್ನ  ಅಂಕಗಳಿಕೆಯನ್ನು 122ಕ್ಕೆ ಏರಿಕೆ ಮಾಡಿಕೊಂಡಿದೆ. ಆ ಮೂಲಕ ಭಾರತ ತಂಡ ಅಗ್ರ ಸ್ಥಾನಕ್ಕೇರಿದ್ದು, 120 ಅಂಕಗಳಿಂದ 118 ಅಂಕಗಳಿಗೆ ಕುಸಿದಿರುವ ದಕ್ಷಿಣ ಆಫ್ರಿಕಾ ತಂಡ 2ನೇ ಸ್ಥಾನಕ್ಕೆ ಕುಸಿದಿದೆ. ಉಳಿದಂತೆ 116 ಅಂಕಗಳನ್ನು  ಹೊಂದಿರುವ ಇಂಗ್ಲೆಂಡ್ 3ನೇ ಸ್ಥಾನದಲ್ಲಿದ್ದು, ತಲಾ 115 ಮತ್ತು 112 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿವೆ. 6ನೇ ಸ್ಥಾನದಲ್ಲಿ ಪಾಕಿಸ್ತಾನ ಕ್ರಿಕೆಟ್  ತಂಡವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com